ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ

Update: 2019-08-08 09:29 GMT

ಹೊಸದಿಲ್ಲಿ, ಆ.8: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ತಮ್ಮ ಭಾಷಣದಲ್ಲಿ ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದುಪಡಿಸಿರುವುದು ಹಾಗೂ ಕಣವೆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿರುವ ನಿರ್ಧಾರದ ಬಗ್ಗೆ ವಿವರಣೆ ನೀಡುವ ಸಾಧ್ಯತೆಯಿದೆ.

ಈ ಹಿಂದೆ ಮಾ.27 ರಂದು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಆಗ ಜೀವಂತ ಉಪಗ್ರಹವನ್ನು ಹೊಡೆದುರುಳಿಸುವ ಸಾಮರ್ಥ್ಯವಿರುವ ಎ-ಸ್ಯಾಟ್ ಕ್ಷಿಪಣಿಯನ್ನು ಭಾರತ ಪ್ರದರ್ಶಿಸುತ್ತಿರುವುದಾಗಿ ಘೋಷಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News