ಮಂಗಳೂರು: ಶಂಕಿತ ಡೆಂಗ್‌ನಿಂದ ಮಹಿಳೆ ಮೃತ್ಯು

Update: 2019-08-08 13:48 GMT
ಆಸ್ಪತ್ರೆಗೆ ಭೇಟಿ ನೀಡಿದ ಐವನ್ ಡಿಸೋಜ

ಮಂಗಳೂರು, ಆ.8: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಂಕಿಸ್ಟ್ಯಾಂಡ್ ರಸ್ತೆ ಬಳಿ ವಾಸವಾಗಿರುವ ಸದಾಶಿವ ಎಂಬವರ ಪತ್ನಿ ಲೀಲಾವತಿ (54) ಶಂಕಿತ ಡೆಂಗ್‌ನಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ವಿಪರೀತ ಜ್ವರದಿಂದ ಬಳಲುತ್ತಿದ್ದ ಲೀಲಾವತಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾರೆ.
ಮೃತರು ಪತಿ ಸಹಿತ ಮೂವರು ಮಕ್ಕಳನ್ನು ಅಗಲಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಸ್ಪತ್ರೆಯಿಂದ ರೋಗಿಯ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಮಹಾಮಾರಿ ಡೆಂಗ್‌ಗೆ ಬಲಿಯಾಗುತ್ತಿರುವವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ರಾಜ್ಯ ಸರಕಾರವನ್ನು ಒತ್ತಾಯಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News