ಶಾಂತಿಯುತ ಬಕ್ರೀದ್ ಆಚರಣೆಗೆ ಸೂಕ್ತ ಕ್ರಮಕ್ಕೆ ಒತ್ತಾಯ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಎಸ್ಪಿಗೆ ಮನವಿ

Update: 2019-08-08 15:12 GMT

ಉಡುಪಿ, ಆ.8: ಉಡುಪಿ ಜಿಲ್ಲೆಯಲ್ಲಿ ಆ.12ರಂದು ಆಚರಿಸಲಾಗುವ ಈದ್ ಉಲ್ ಅಝ್‌ಹಾ (ಬಕ್ರೀದ್) ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಜಿಲ್ಲೆಯಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನಿಯೋಗವೊಂದು ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಶಾ ಜೇಮ್ಸ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಎಸ್ಪಿಯವರಿಗೆ ಹಬ್ಬದ ಶುಭಾಶಯ ಕೋರಿದ ನಿಯೋಗ, ಅಲ್ಪಸಂಖ್ಯಾತರ ಧಾರ್ಮಿಕ, ಸಾಮಾಜಿಕ ಹಕ್ಕುಗಳನ್ನು ಹತ್ತಿಕ್ಕುವ ಮತ್ತು ಅವರ ಆಚರಣೆಗಳಿಗೆ ತಡೆಯೊಡ್ಡಿ ತನ್ನ ನಂಬಿಕೆ ಮತ್ತು ಆಚರಣೆಗಳನ್ನು ಬಲವಂತವಾಗಿ ಹೇರುವ ಪ್ರಯತ್ನ ಕೆಲವರಿಂದ ನಡೆಯುವ ಹಾಗೂ ಆ ಮೂಲಕ ಅಶಾಂತಿ ಹರಡು ಪ್ರಯತ್ನ ನಡೆಯಬಹುದು. ಈ ಬಗ್ಗೆ ಜಿಲ್ಲಾ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳು್ಳವಂತೆ ಮನವಿಯಲ್ಲಿ ಕೋರಲಾಗಿದೆ.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನಿಯೋಗದಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೌಲಾ, ಉಪಾಧ್ಯಕ್ಷರಾದ ಹಾಜಿ ಅಬ್ದುಲ್ಲಾ ಪರ್ಕಳ, ಖತೀಬ್ ಅಬ್ದುರ್ರಶೀದ್ ಮಲ್ಪೆ, ಜೊತೆ ಕಾರ್ಯದರ್ಶಿ ಅಬ್ದುಲ್ ಅಝೀಝ್ ಉದ್ಯಾವರ, ಒಕ್ಕೂಟದ ವಕ್ತಾರ ಸಲಾಹುದ್ದೀನ್ ಅಬ್ದುಲ್ಲಾಹ್, ಕೇಂದ್ರ ಸಮಿತಿ ಸದಸ್ಯರಾದ ಟಿ.ಎಮ್ ಜಫ್ರುಲ್ಲಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News