15 ಜಿಲ್ಲೆಗಳಲ್ಲಿ ಅತಿವೃಷ್ಟಿ: ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಲು ಮನವಿ

Update: 2019-08-08 16:20 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ. 8: ರಾಜ್ಯದ ಬೆಳಗಾವಿ, ಉತ್ತರ ಕನ್ನಡ, ಕೊಡಗು ಜಿಲ್ಲೆ ಸೇರಿದಂತೆ 15 ಜಿಲ್ಲೆಗಳಲ್ಲಿ ಅತಿವೃಷ್ಟಿ ಸಂಭವಿಸಿದ್ದು, ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಮಾನವೀಯ ದೃಷ್ಟಿಯಿಂದ ನೆರವಾಗಲು ಸಿಎಂ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ದೇಣಿಗೆ ನೀಡಲು ಮನವಿ ಮಾಡಲಾಗಿದೆ.

ದೇಣಿಗೆ ನೀಡಲು ಆಸಕ್ತ ದಾನಿಗಳು/ಸಾರ್ವಜನಿಕರು ಈ ಕೆಳಕಂಡ ಬ್ಯಾಂಕ್ ಖಾತೆಗೆ ನೆರವಾಗಿ ಹಣ ವರ್ಗಾಯಿಸಬಹುದು. ಅಲ್ಲದೆ, ಚೆಕ್ ಮತ್ತು ಡಿಡಿ ಮೂಲಕವೂ ದೇಣಿಗೆ ನೀಡಬಹುದಾಗಿದೆ ಎಂದು ಮುಖ್ಯಮಂತ್ರಿ ಕಾರ್ಯದರ್ಶಿ ಕೋರಿದ್ದಾರೆ.

Chief Minister Relief Found Natural Calamity ಮುಖ್ಯಮಂತ್ರಿ ಪ್ರಕೃತಿ ವಿಕೋಪ ಪರಿಹಾರ ನಿಧಿ , ಎಸ್‌ಬಿಐ(ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ) ವಿಧಾನಸೌಧ ಶಾಖೆ, ಖಾತೆ ಸಂಖ್ಯೆ-3788 7098 605, ಐಎಫ್‌ಎಸ್‌ಸಿ ಕೋಡ್-ಎಸ್‌ಬಿಐಎನ್0040277, ಎಂಐಸಿಆರ್ ಸಂಖ್ಯೆ- 560002419, ಚೆಕ್ ಕಳುಹಿಸಬೇಕಾದ ವಿಳಾಸ-ನಂ-235-ಎ, ಎರಡನೆ ಮಹಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆ, ವಿಧಾನಸೌಧ ಬೆಂಗಳೂರು-560001ಗೆ ಸಂಪರ್ಕಿಸಲು ಪ್ರಕಟಣೆ ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News