ಖಾಸಿಂ ಹಾಜಿ

Update: 2019-08-08 17:11 GMT

ವಿಟ್ಲ : ಕೆದಿಲ ಗ್ರಾಮದ ಪೇರಮುಗೇರು - ಕುದ್ಮಾಣ್  ನಿವಾಸಿ  ಖಾಸಿಂ ಹಾಜಿ (53) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು.

ಕಳೆದ 15 ವರ್ಷಗಳಿಂದ ಕತ್ತಾರ್ ನಲ್ಲಿ ಚಾಲಕ ವೃತ್ತಿಯಲ್ಲಿದ್ದ ಇವರು ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಅನಾರೋಗ್ಯಪೀಡಿತರಾದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಕೊನೆಯುಸಿರೆಳೆದರು.

ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಆಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ