ಪಾಕ್ ಪತ್ರದ ಬಗ್ಗೆ ‘ನೋ ಕಾಮೆಂಟ್ಸ್’: ಭದ್ರತಾ ಮಂಡಳಿ ಅಧ್ಯಕ್ಷೆ

Update: 2019-08-09 15:15 GMT

ನ್ಯೂಯಾರ್ಕ್, ಆ. 9: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ಭಾರತ ರದ್ದುಪಡಿಸಿರುವುದಕ್ಕೆ ಸಂಬಂಧಿಸಿ ವಿಶ್ವಸಂಸ್ಥೆಗೆ ಪಾಕಿಸ್ತಾನ ಬರೆದಿರುವ ಪತ್ರದ ಬಗ್ಗೆ ಹೇಳಿಕೆ ನೀಡಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷೆ ಜೋನಾ ರೊನೇಕಾ ಗುರುವಾರ ನಿರಾಕರಿಸಿದ್ದಾರೆ.

ನ್ಯೂಯಾರ್ಕ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯೊಂದರಲ್ಲಿ, ಪಾಕಿಸ್ತಾನ ಬರೆದಿರುವ ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಪತ್ರಕರ್ತರೊಬ್ಬರು ಕೋರಿದಾಗ, ‘‘ಏನೂ ಹೇಳುವುದಿಲ್ಲ’’ ಎಂದರು.

 ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಭಾರತೀಯ ಸಂವಿಧಾನದ 370ನೇ ವಿಧಿಯನ್ನು ಭಾರತ ರದ್ದುಗೊಳಿಸಿರುವುದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯವನ್ನು ಉಲ್ಲಂಘಿಸುತ್ತದೆ ಎಂದು ಪಾಕಿಸ್ತಾನದ ವಿದೇಶ ಸಚಿವ ಶಾ ಮೆಹ್ಮೂದ್ ಖುರೇಶಿ ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಆಂಟೋನಿಯೊ ಗುಟೆರಸ್‌ಗೆ ಪತ್ರ ಬರೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News