ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ, ಸಂಸ್ಥೆಗೆ ರಾಜ್ಯ ಪ್ರಶಸ್ತಿ

Update: 2019-08-09 16:33 GMT

ಉಡುಪಿ, ಆ.9: ಕರ್ನಾಟಕ ಸರಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25,000 ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ಒಂದು ಲಕ್ಷ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಿದೆ.

2019ನೇ ಸಾಲಿನ ಪ್ರಶಸ್ತಿಗಾಗಿ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿ ಯಲ್ಲಿ ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಗೆ ಆ.31ರ ಒಳಗೆ ಸಲ್ಲಿಸಬೇಕು. ಅರ್ಜಿ ಗಳನ್ನು ಕನ್ನಡ ಭಾಷೆುಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News