ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಬಿರುಕು: ಬ್ಯಾರಿಕೇಡ್ ಹಾಕಿ ಸಂಚಾರ ನಿಯಂತ್ರಿಸುತ್ತಿರುವ ಪೊಲೀಸರು
Update: 2019-08-09 22:57 IST
ಮಂಗಳೂರು, ಆ.9: ತೊಕ್ಕೊಟ್ಟು ಮೇಲ್ಸೇತುವೆಯ ಒಂದು ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಆ ಸ್ಥಳದಿಂದ ವಾಹನಗಳು ಸಂಚರಿಸದಂತೆ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿದ್ದಾರೆ.
ತೊಕ್ಕೊಟ್ಟು ಮೇಲ್ಸೇತುವೆ ಬಿರುಕು ಬಿಟ್ಟಿದೆ ಎನ್ನುವ ಸುದ್ದಿ ಇಂದು ಮಧ್ಯಾಹ್ನದ ವೇಳೆಗಾಗಲೇ ಹಬ್ಬಿತ್ತಾದರೂ ಈ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಗಳಿರಲಿಲ್ಲ. ಸುದ್ದಿಯಿಂದ ಕಂಗಾಲಾದ ಬಹಳಷ್ಟು ಮಂದಿ ತೊಕ್ಕೊಟ್ಟು ಕಡೆ ಜಮಾಯಿಸಿದ್ದು, ವಿಚಾರಿಸಿದಾಗ ಸರಿಯಾದ ಮಾಹಿತಿ ಸಿಗದೇ ಹಿಂದಕ್ಕೆ ಬಂದಿದ್ದರು. ಆದರೆ ಇದೀಗ ಬಿರುಕು ಬಿಟ್ಟಿರುವುದು ಸತ್ಯ ಎಂದು ಪೊಲೀಸರೇ ಸ್ಪಷ್ಟಪಡಿಸಿದ್ದಾರೆ.
“ಬಿರುಕು ಬಿಟ್ಟ ಕಾರಣ ವಾಹನಗಳನ್ನು ನಿಯಂತ್ರಿಸಲು ಬ್ಯಾರಿಕೇಡ್ ಗಳನ್ನು ಹಾಕಲಾಗುತ್ತಿದೆ. ಆದರೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಿಲ್ಲ. ಬೆಳಗ್ಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ” ಎಂದು ಸ್ಥಳದಲ್ಲಿರುವ ಪೊಲೀಸರು ‘ವಾರ್ತಾ ಭಾರತಿ’ಗೆ ಪ್ರತಿಕ್ರಿಯಿಸಿದ್ದಾರೆ