ಐಎಂಎ ವಂಚನೆ ಪ್ರಕರಣ: ಆ.13ಕ್ಕೆ ರೋಶನ್ ಬೇಗ್ ವಿಚಾರಣೆ

Update: 2019-08-09 17:54 GMT

ಬೆಂಗಳೂರು, ಆ.9: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ರೋಶನ್ ಬೇಗ್ ಅವರಿಗೆ ಆ.13ರಂದು ವಿಚಾರಣೆಗೆ ಹಾಜರಾಗುವಂತೆ ಸಿಟ್ ತನಿಖಾಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‌ನಿಂದ ಕೋಟಿ ಹಣ ಪಡೆದಿರುವ ಆರೋಪ ಹೊತ್ತ ಇವರು, ಈ ಹಿಂದೆ ಎರಡು ಬಾರಿ ವಿಚಾರಣೆಗೆ ಹಾಜರಾಗಿ ನಂತರ ಅನಾರೋಗ್ಯದ ನೆಪವೊಡ್ಡಿ ತನಿಖೆಗೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಟ್ ಹೇಳಿದೆ.

ಸದ್ಯ ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಪೊಲೀಸರ ವಶದಲ್ಲಿದ್ದು, ತನಿಖೆ ವೇಳೆ ಕೆಲ ರಾಜಕಾರಣಿಗಳು, ಬಿಲ್ಡರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರುಗಳನ್ನು ಉಲ್ಲೇಖಿಸಿದ್ದು, ಅವರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಿ ತನಿಖೆ ಮುಂದುರಿಸಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News