ಜಮ್ಮು-ಕಾಶ್ಮೀರವನ್ನು ಇಬ್ಭಾಗಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ

Update: 2019-08-09 18:38 GMT

ಹೊಸದಿಲ್ಲಿ, ಆ.9: ಜಮ್ಮು-ಕಾಶ್ಮೀರವನ್ನು ವಿಭಜಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶುಕ್ರವಾರ ಸಹಿ ಹಾಕಿದ್ದು,ಅಕ್ಟೋಬರ್ 31ರಿಂದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಲಿವೆ.

ಸಂಸತ್ತು ಈ ವಾರದ ಪೂರ್ವಾರ್ಧದಲ್ಲಿ ಮಸೂದೆಯನ್ನು ಅಂಗೀಕರಿಸಿತ್ತು.

 ಜಮ್ಮು-ಕಾಶ್ಮೀರ ಪುನರ್‌ರಚನೆ ಕಾಯ್ದೆ,2019ಕ್ಕೆ ರಾಷ್ಟ್ರಪತಿಗಳು ಒಪ್ಪಿಗೆ ನೀಡಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಯೋರ್ವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News