ನಿಯಮ ಪಾಲಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ: ಹೈಕೋರ್ಟ್

Update: 2019-08-09 18:39 GMT

ಬೆಂಗಳೂರು, ಆ.9: ಸರಕಾರಿ ನೌಕರರು ಹಾಗೂ ಅಧಿಕಾರಿಗಳನ್ನು ಎರವಲು ಸೇವೆಯಡಿ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ವರ್ಗಾವಣೆ ಮಾಡಿ ಆದೇಶಿಸಿದ ಆದೇಶವನ್ನು ಪರಿಶೀಲಿಸುವಂತೆ ಸರಕಾರಕ್ಕೆ ಹೈಕೋರ್ಟ್ ಸರಕಾರಕ್ಕೆ ನಿರ್ದೇಶನ ನೀಡಿದೆ.

ಬಿಬಿಎಂಪಿ ನಗರ ಯೋಜನೆ ವಿಭಾಗದ ಸಹಾಯಕ ನಿರ್ದೇಶಕರಾಗಿದ್ದ ಎಂ.ಆರ್.ಪಾಂಡುರಂಗ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಪಿ.ಬಿ.ಭಜಂತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಎರವಲು ಸೇವೆಯಡಿ ಅಧಿಕಾರಿಗಳನ್ನು ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ವರ್ಗಾವಣೆ ಮಾಡುವ ಸಂದರ್ಭದಲ್ಲಿ ನಿಯಮಗಳನ್ನು ರಾಜ್ಯ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಸ್ಥಳೀಯ ಸಂಸ್ಥೆಗಳ ಆಯುಕ್ತರು ನಿರ್ಲಕ್ಷ ಮಾಡುತ್ತಿದ್ದಾರೆ. ನಿಯಮಗಳನ್ನು ಸರಿಯಾಗಿ ಪರಿಶೀಲನೆ ಮಾಡದೆ ಹಾಗೂ ನಿಯಮಗಳನ್ನು ಬದಿಗೆ ಸರಿಸಿ ಅಕ್ರಮವಾಗಿ ಎರವಲು ಸೇವೆಯಡಿ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದ್ದಾರೆ ಎಂದು ನ್ಯಾಯಪೀಠವು ಬೇಸರ ವ್ಯಕ್ತಪಡಿಸಿದೆ.

ನಿಯಮಗಳಿಗೆ ವಿರುದ್ಧವಾಗಿ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ವರ್ಗಾವಣೆ ಮಾಡಿರುವುದು ಖಚಿತವಾದರೆ, ಆ ಅಧಿಕಾರಿಯನ್ನು ಗುರುತಿಸಿ, ಮಾತೃ ಇಲಾಖೆಗೆ ಮರು ನಿಯೋಜಿಸಬೇಕು. ಎರವಲು ಸೇವೆ ಮೇಲೆ ಅಧಿಕಾರಿಯನ್ನು ನಿಯೋಜನೆ ಮಾಡುವ ವೇಳೆ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News