ಗುರುಪುರ-ಫಲ್ಗುಣಿ ತೀರವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ
Update: 2019-08-10 14:17 IST
ಮಂಗಳೂರು, ಆ.10: ಭಾರೀ ಮಳೆಯಿಂದಾಗಿ ಗುರುಪುರ-ಫಲ್ಗುಣಿ ನದಿಗೆ ಪ್ರವಾಹೋಪಾದಿಯಲ್ಲಿ ನೀರು ಹರಿದು ಬರುತ್ತಿದೆ. ಈ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ತೀರವಾಸಿಗಳು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ.
ಈಗಾಗಲೇ ನದಿ ತೀರದ ಪ್ರಮುಖ ಸಂಭಾವ್ಯ ಅಪಾಯ ಸ್ಥಳಗಳಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಗುರುಪುರ- ಫಲ್ಗುಣಿ ನದಿ ತೀರದ ಎರಡೂ ಬದಿಗಳ ಸಮೀಪದ ನಿವಾಸಿಗಳು ತಕ್ಷಣದಿಂದಲೇ ತಮ್ಮ ಕುಟುಂಬದೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.