ಆ.16ರಂದು ಟೀಮ್ ಇಂಡಿಯಾ ಕೋಚ್ ಆಯ್ಕೆಗೆ ಸಂದರ್ಶನ

Update: 2019-08-10 18:14 GMT

ಹೊಸದಿಲ್ಲಿ, ಆ. 10: ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಹುದ್ದೆಗೆ ಅಭ್ಯರ್ಥಿಗಳ ಆಯ್ಕೆಯನ್ನು ಆ.16ರಂದು ಕಪಿಲ್ ದೇವ್ ನೇತೃತ್ವದ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ(ಸಿಎಎಸ್) ನಡೆಸಲಿದೆ.

 ಬಿಸಿಸಿಐ ಈಗಾಗಲೇ ಕೋಚ್ ಆಯ್ಕೆಗೆ ಸಂದರ್ಶನ ದಿನ ನಿಗದಿಪಡಿಸಿ ಮೂವರು ಸದಸ್ಯರ ಕ್ರಿಕೆಟ್ ಸಲಹಾ ಸಮಿತಿಗೆ ಆದೇಶ ನೀಡಿದೆ.

ಕ್ರಿಕೆಟ್ ಸಲಹಾ ಸಮಿತಿಯಲ್ಲಿ ಕಪಿಲ್ ದೇವ್, ಅಂಶುಮಾನ್ ಗಾಯಕ್ವಾಡ್ ಮತ್ತು ಶಾಂತಾ ರಂಗಸ್ವಾಮಿ ಇದ್ದಾರೆ.

 ಆಸ್ಟ್ರೇಲಿಯದ ಮಾಜಿ ಆಲ್‌ರೌಂಡರ್ ಟಾಮ್ ಮೂಡಿ ಮತ್ತು ನ್ಯೂಝಿಲ್ಯಾಂಡ್‌ನ ಮಾಜಿ ಕೋಚ್ ಮೈಕ್ ಹೆಸನ್ ಈಗಾಗಲೇಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಟೀಮ್ ಇಂಡಿಯಾದ ಪ್ರಧಾನ ಕೋಚ್ ರವಿ ಶಾಸ್ತ್ರಿ ತನ್ನ ಹುದ್ದೆಯಲ್ಲಿ ಮುಂದುವರಿಯಲು ಬಯಸಿದ್ದಾರೆ. ಅವರು ಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ನೇರ ಪ್ರವೇಶ ಪಡೆದಿದ್ದಾರೆ.

 ತಂಡದ ಸಹಾಯಕ ಸಿಬ್ಬಂದಿ ಹುದ್ದೆಗೆ ಟೀಮ್ ಇಂಡಿಯಾದ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‌ಕೆ ಪ್ರಸಾದ್ ನೇತೃತ್ವದ ಸಮಿತಿ ಆಯ್ಕೆ ನಡೆಸಲಿದೆ. ದಕ್ಷಿಣ ಆಫ್ರಿಕದ ಕ್ರಿಕೆಟಿಗ ಜಾಂಟಿ ರೋಡ್ಸ್ ಫೀಲ್ಡಿಂಗ್ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಬಿಸಿಸಿಐ ಈ ತನಕ ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಜಾಂಟಿ ರೋಡ್ಸ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News