​ಅವಮಾನ ತಾಳಲಾರದೇ ಅತ್ಯಾಚಾರ ಸಂತ್ರಸ್ತೆ ಬಾಲಕಿ ಆತ್ಮಹತ್ಯೆ

Update: 2019-08-11 03:47 GMT

ಕಾನ್ಪುರ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 13 ವರ್ಷದ ಬಾಲಕಿಯೊಬ್ಬಳು ಅವಮಾನ ತಾಳಲಾರದೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಆರೋಪಿಗಳನ್ನು ಇನ್ನೂ ಬಂಧಿಸದಿರುವುದರಿಂದ ಹತಾಶಳಾಗಿ ಮತ್ತು ನೆರೆಹೊರೆಯ ಮಹಿಳೆಯರು ಬಾಲಕಿಗೆ ಅವಮಾನ ಮಾಡಿದ್ದರಿಂದ ಬೇಸತ್ತು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬಾಲಕಿಯ ಪೋಷಕರು ಹೇಳಿದ್ದಾರೆ.

ಜು.13ರಂದು ಮೂವರು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದರು ಎನ್ನಲಾಗಿದೆ. ಸಂತ್ರಸ್ತೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ನಗರ ಪೊಲೀಸ್ ಅಧೀಕ್ಷಕ ರಾಜ್‌ಕುಮಾರ್ ಅಗರ್‌ವಾಲ್ ಹೇಳಿದ್ದಾರೆ.

ಯಾವುದೇ ಆತ್ಮಹತ್ಯೆ ಟಿಪ್ಪಣಿ ಪತ್ತೆಯಾಗಿಲ್ಲ. ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ನಿಷ್ಕ್ರಿಯತೆ ಹಾಗೂ ನೆರೆಹೊರೆಯ ಮಹಿಳೆಯರು ಬಾಲಕಿಯನ್ನು ಹೀಯಾಳಿಸಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಕುಟುಂಬದವರು ಆಪಾದಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಘಟನೆ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಠಾಣಾಧಿಕಾರಿ ಸತ್ಯದೇವ್ ಶರ್ಮಾ, ಕೂಪರ್‌ಗಂಜ್ ಠಾಣಾಧಿಕಾರಿ ಉಮೇಶ್ ಕುಮಾರ್, ಮುಖ್ಯಪೇದೆ ಉರ್ಮೆದ್ ಸಿಂಗ್ ಹಾಗೂ ಪೊಲೀಸ್ ಪೇದೆ ಸಂಜೀವ್ ಗೌತಮ್ ಅವರನ್ನು ಅಮಾನತುಗೊಳಿಸಲಾಗಿದೆ.

ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಇಬ್ಬರು ಮಹಿಳೆಯರ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News