ನೆರೆ ನಿರ್ವಹಣೆ ವಿಚಾರದಲ್ಲಿ ಸರ್ಕಾರಕ್ಕೆ ನಮ್ಮಿಂದ ಸಂಪೂರ್ಣ ಸಹಕಾರ: ಮಾಜಿ ಸಿಎಂ ಕುಮಾರಸ್ವಾಮಿ

Update: 2019-08-11 09:06 GMT

ಮೈಸೂರು, ಆ.11: ರಾಜ್ಯದಲ್ಲಿ ನೆರೆ ನಿರ್ವಹಣೆ ಮಾಡುವ ವಿಚಾರದಲ್ಲಿ ಸರ್ಕಾರಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಮೈಸೂರಿನ ಮಳೆ ಹಾನಿ ಪ್ರದೇಶಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು. ನಗರದ ಸರಸ್ವತಿ ಪುರಂನಲ್ಲಿ ಕುಸಿದು ಬಿದ್ದಿದ್ದ  ಅಗ್ನಿಶಾಮಕ ದಳ ಕಟ್ಟಡವನ್ನ  ಕುಮಾರಸ್ವಾಮಿ ವೀಕ್ಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, ರಾಜ್ಯದ ನೆರೆ ನಿರ್ವಹಣೆ ಯಡಿಯೂರಪ್ಪ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ.  ಅನಗತ್ಯವಾಗಿ ಟೀಕೆ ರಾಜಕಾರಣ ಮಾಡುವುದಿಲ್ಲ. ರಾಜ್ಯದ ಜನರ ಸಂಕಷ್ಟದಲ್ಲಿದ್ದಾರೆ. ನೊಂದವರಿಗೆ ನೆರವಾಗುವುದೇ ಮೊದಲ ಆಧ್ಯತೆ ಎಂದರು.

ರಾಜ್ಯ ಸರ್ಕಾರದ ಖಜಾನೆ ಸುಸ್ಥಿರವಾಗಿದೆ. 8 ಸಾವಿರ ಕೋಟಿಯನ್ನ ಮೀಸಲಿಟ್ಟಿದ್ದೇನೆ. ಹಣಕಾಸು ಸ್ಥಿತಿಯನ್ನು ಸರಿಯಿಲ್ಲ ಎಂಬ ಸಿಎಂ  ಡಿಯೂರಪ್ಪ ಹೇಳಿಕೆ ಸರಿಯಲ್ಲ. ಯಡಿಯೂರಪ್ಪ ಈ ವಿಚಾರದಲ್ಲಿ  ಚಿಲ್ಲರೆ ರಾಜಕೀಯ ಬಿಡಬೇಕು. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ನೆರೆ ಸಂತ್ರಸ್ತರಿಗಾಗಿ ಕೇಂದ್ರ ಸರ್ಕಾರ ನೆರೆ ನಿರ್ವಹಣೆಗೆ ತಕ್ಷಣ ಸ್ಪಂದಿಸಬೇಕು  ಎಂದು ಹೆಚ್.ಡಿಕೆ  ಆಗ್ರಹಿಸಿದರು. ಇನ್ನೆರಡು ದಿನಗಳಲ್ಲಿ ಮೈಸೂರಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ ಎಂದು ಅವರು ತಿಳಿಸಿದರು.

ಋಣಮುಕ್ತ ಕಾಯಿದೆ ಜಾರಿ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಸರ್ಕಾರ ಕೂಡಲೇ ಯೋಜನೆ ಜಾರಿಗೆ ಮುಂದಾಗಬೇಕು. 90 ದಿನದೊಳಗೆ ಯೋಜನೆ ಜಾರಿಯಾಗಬೇಕು. ಈಗಾಗಲೇ 10 ದಿನ ಕಳೆದಿದೆ. ಯೋಜನೆ ಬಗ್ಗೆ ಹಳ್ಳಿ ಗಳಲ್ಲಿ ಡಂಗುರ ಸಾರುವ ಕೆಲಸ ಆಗಬೇಕು. ಈ ಬಗ್ಗೆ ಶೀಘ್ರದಲ್ಲೇ ಜೆಡಿಎಸ್ ಕಾರ್ಯಕರ್ತರ ಮೂಲಕ ಪ್ರಚಾರ ಮಾಡಿಸುತ್ತೇನೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News