370 ವಿಧಿ ರದ್ದತಿಯಿಂದ ಕಾಶ್ಮೀರದಲ್ಲಿ ಭಯೋತ್ಪಾದನೆ ಅಂತ್ಯ: ಅಮಿತ್ ಶಾ

Update: 2019-08-11 14:16 GMT

ಚೆನ್ನೈ, ಆ.11: ಸಂವಿಧಾನದ 370ನೇ ವಿಧಿಯಡಿ ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವುದು ಭಯೋತ್ಪಾದನೆಗೆ ಅಂತ್ಯಹಾಡಿ ಈ ಪ್ರದೇಶದ ಅಭಿವೃದ್ಧಿಗೆ ನಾಂದಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ರಾಜ್ಯಸಭಾಧ್ಯಕ್ಷರಾಗಿ 2 ವರ್ಷ ಕಾರ್ಯನಿರ್ವಹಿಸಿದ ಕುರಿತ ಪುಸ್ತಕ ‘ಲಿಸನಿಂಗ್, ಲರ್ನಿಂಗ್ ಆ್ಯಂಡ್ ಲೀಡಿಂಗ್’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಶಾ, ದೇಶಕ್ಕೆ ಯಾವುದೇ ರೀತಿಯಲ್ಲಿ ಪ್ರಯೋಜನವಾಗದ 370ನೇ ವಿಧಿಯನ್ನು ರದ್ದುಗೊಳಿಸಲೇ ಬೇಕು ಎಂದು ತಾನು ದೃಢ ನಿಲುವು ತಳೆದಿದ್ದೆ . ಇದರಿಂದ ಆ ರಾಜ್ಯದಲ್ಲಿ ಅಭಿವೃದ್ಧಿ ಪರ್ವದ ಆರಂಭವಾಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ವೆಂಕಯ್ಯ ನಾಯ್ಡು ಅವರ ಜೀವನ ಯುವಪೀಳಿಗೆಗೆ ಆದರ್ಶವಾಗಿದೆ. ನಾವು ಹೇಗೆ ಆಲಿಸಬೇಕು, ಕಲಿಯಬೇಕು ಮತ್ತು ಸಮಾಜವನ್ನು ಮುನ್ನಡೆಸಬೇಕು ಎಂಬುದನ್ನು ಈ ಕೃತಿ ವಿವರಿಸುತ್ತದೆ ಎಂದು ಶಾ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News