×
Ad

ಆ.12 ಬಂಟ್ವಾಳ, ಬೆಳ್ತಂಗಡಿಗೆ ಮುಖ್ಯಮಂತ್ರಿ ಯಡಿಯೂರಪ್ಪ

Update: 2019-08-11 21:28 IST

ಮಂಗಳೂರು, ಆ.11: ದ.ಕ. ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿ ವೀಕ್ಷಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆ.12ರಂದು ಆಗಮಿಸಲಿದ್ದಾರೆ. ಜಿಲ್ಲೆಯಲ್ಲಿ ಮಳೆಹಾನಿ ಸಂಭವಿಸಿದ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸುವರು.

ಮಧ್ಯಾಹ್ನ 11:20ಕ್ಕೆ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುವ ಮುಖ್ಯಮಂತ್ರಿ ಇಲ್ಲಿಂದ ರಸ್ತೆ ಮೂಲಕ ಮಹಾಮಳೆಗೆ ಹಾನಿಗೊಳಗಾದ ಬೆಳ್ತಂಗಡಿ ಹಾಗೂ ಬಂಟ್ವಾಳ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

1:30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವರು. 2:30ಕ್ಕೆ ಧರ್ಮಸ್ಥಳದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸುವರು. 3:15ಕ್ಕೆ ಧರ್ಮಸ್ಥಳದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಆಗಮಿಸಿ ವಿಶೇಷ ವಿಮಾನದ ಮೂಲಕ ಮೈಸೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News