ಎರಡನೇ ಏಕದಿನ: ಭಾರತ 279/7

Update: 2019-08-11 17:59 GMT

 ಪೋರ್ಟ್ ಆಫ್ ಸ್ಪೇನ್, ಆ.11: ನಾಯಕ ವಿರಾಟ್ ಕೊಹ್ಲಿ ಶತಕ ಹಾಗೂ ಉದಯೋನ್ಮುಖ ಆಟಗಾರ ಶ್ರೇಯಸ್ ಅಯ್ಯರ್ ಅರ್ಧಶತಕದ ಕೊಡುಗೆ ನೆರವಿನಿಂದ ಭಾರತ ತಂಡ ವೆಸ್ಟ್ ಇಂಡೀಸ್ ತಂಡಕ್ಕೆ 2ನೇ ಏಕದಿನ ಪಂದ್ಯದ ಗೆಲುವಿಗೆ 280 ರನ್ ಗುರಿ ನೀಡಿದೆ.

ಟಾಸ್ ಜಯಿಸಿದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಮಳೆ ಅಡ್ಡಿಪಡಿಸಿದ ಪಂದ್ಯದಲ್ಲಿ ಭಾರತ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 279 ರನ್ ಗಳಿಸಿತು.

ಇನಿಂಗ್ಸ್‌ನ 3ನೇ ಎಸೆತದಲ್ಲಿ ಶಿಖರ್ ಧವನ್(2) ವಿಕೆಟ್ ಕಳೆದುಕೊಂಡ ಭಾರತ ಕಳಪೆ ಆರಂಭ ಪಡೆಯಿತು. ಆಗ ರೋಹಿತ್ ಶರ್ಮಾ(18)ರೊಂದಿಗೆ ಕೈಜೋಡಿಸಿದ ಕೊಹ್ಲಿ 2ನೇ ವಿಕೆಟ್ ಜೊತೆಯಾಟದಲ್ಲಿ 74 ರನ್ ಸೇರಿಸಿದರು.

ಭಾರತ 101 ರನ್‌ಗೆ 3 ವಿಕೆಟ್ ಕಳೆದುಕೊಂಡಾಗ ಕೊಹ್ಲಿಗೆ ಶ್ರೇಯಸ್ ಅಯ್ಯರ್(71, 68 ಎಸೆತ, 5 ಬೌಂಡರಿ, 1ಸಿಕ್ಸರ್)ಸಾಥ್ ನೀಡಿದರು. ಈ ಜೋಡಿ 4ನೇ ವಿಕೆಟ್ ಜೊತೆಯಾಟದಲ್ಲಿ 125 ರನ್ ಸೇರಿಸಿತು. ಈ ಇಬ್ಬರು ಬೇರ್ಪಟ್ಟ ಬಳಿಕ ದೊಡ್ಡ ಜೊತೆಯಾಟ ಮೂಡಿಬರಲಿಲ್ಲ. 42ನೇ ಶತಕ ಸಿಡಿಸಿ ಕೊಟ್ರೆಲ್‌ಗೆ ವಿಕೆಟ್ ಒಪ್ಪಿಸಿದ ಕೊಹ್ಲಿ 125 ಎಸೆತಗಳಲ್ಲಿ 120 ರನ್ ಗಳಿಸಿದರು.

ವಿಂಡೀಸ್ ಪರ ಬ್ರಾತ್‌ವೇಟ್(3-53) ಯಶಸ್ವಿ ಬೌಲರ್ ಎನಿಸಿಕೊಂಡರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News