ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

Update: 2019-08-12 04:06 GMT

ಉಡುಪಿ, ಆ.12: ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ಮುಸ್ಲಿಮ್ ಬಾಂಧವರು ಈದುಲ್ ಅಝ್ಹ(ಬಕ್ರೀದ್) ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದಾರೆ.

ಉಡುಪಿ ಜಾಮೀಯ ಮಸೀದಿಯ ವೌಲಾನ ಅಬ್ದುರ್ರಶೀದ್ ನದ್ವಿ ಮತ್ತು ಉಡುಪಿ ಅಂಜುಮಾನ್ ಮಸೀದಿಯ ವೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಸಾಮೂಹಿಕ ವಿಶೇಷ ಈದ್ ನಮಾಝ್ ನಡೆಯಿತು. ಈ ಸಂದರ್ಭದಲ್ಲಿ ಧರ್ಮಗುರುಗಳು ಈದ್ ಸಂದೇಶ ನೀಡಿದರು. 
ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯ ಖತೀಬ್ ಅಲ್ಹಾಜ್ ಬಿ.ಕೆ.ಅಬ್ದುರ್ರಹ್ಮಾನ್ ಮದನಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆ ಯಿತು. ಕುಂದಾಪುರ ಜುಮಾ ಮಸೀದಿಯ ಧರ್ಮಗುರು ವೌಲಾನ ಮುಫ್ತಿ ಸಮೀರ್ ಮತ್ತು ಕಾರ್ಕಳ ಜಾಮೀಯ ಮಸೀದಿಯ ವೌಲಾನ ಜಾಹಿರ್ ಅಹ್ಮದ್ ಅಲ್ಕಾಸ್ಮಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನಿರ್ವಹಿಸ ಲಾಯಿತು.

ಅದೇ ರೀತಿ ಜಿಲ್ಲೆಯ ನಾವುಂದ, ಗಂಗೊಳ್ಳಿ, ಮಲ್ಪೆ, ನಿಟ್ಟೆ, ಪಡುಬಿದ್ರೆ, ಕಾಪು ಸಹಿತ ವಿವಿಧ ಮಸೀದಿಗಳಲ್ಲಿ ವಿಶೇಷ ನಮಾಝ್ ನಿರ್ವಹಿಸ ಲಾಯಿತು. ಬಳಿಕ ಮುಸ್ಲಿಮ್ ಬಾಂಧವರು ಪರಸ್ಪರ ಶುಭಾಶಯ ಹಂಚಿ ಕೊಂಡರು. ಹಬ್ಬದ ಪ್ರಯುಕ್ತ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News