ಉಡುಪಿ ಮೀನು ಸಂಸ್ಕರಣಾ ಘಟಕದಲ್ಲಿ ಅನಿಲ ಸ್ಫೋಟ

Update: 2019-08-12 06:41 GMT


ಉಡುಪಿ, ಆ.12: ಮೀನು ಸಂಸ್ಕರಣಾ ಘಟಕದಲ್ಲಿ ದ್ರವ ಅಮೋನಿಯ ಸ್ಫೋಟಗೊಂಡ ಪರಿಣಾಮ 20ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಇಂದು ನಡೆದಿದೆ.

ಮುಂಜಾನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಪಂ ವ್ಯಾಪ್ತಿಯ ಬಗ್ವಾಡಿ ವರದಿಯಾಗಿದೆ.

ದೇವಲ್ಕುಂದದಲ್ಲಿ 2 ವರ್ಷಗಳ ಹಿಂದೆ ಪ್ರಾರಂಭಗೊಂಡ ಮಲ್ಪೆ ಫಿಶ್ ಮರೈನ್ ಎಕ್ಸ್‌ಪೋರ್ಟ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ದ್ರವರೂಪದ ಅಮೋನಿಯ ಸ್ಫೋಟಗೊಂಡ ಪರಿಣಾಮತೀವ್ರವಾಗಿ ಅಸ್ವಸ್ಥಗೊಂಡ ಮಹಿಳೆಯರೇ ಅಧಿಕವಿದ್ದ, 20ಕ್ಕೂ ಅಧಿಕ ಕಾರ್ಮಿಕರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ಮೀನಿನ ಸಂಸ್ಕರಣೆಗೆ ಬಳಸುವ ಮಂಜುಗಡ್ಡೆ ತಯಾರಿಗಿ ದ್ರವ ಅಮೋನಿಯಂನ್ನು ಬಳಸಲಾಗುತ್ತದೆ. ಇದು ಇಂದು ಬೆಳಗ್ಗೆ ಸ್ಫೋಟಗೊಂಡಿದೆ. ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಕಾರ್ಯಾಚರಣೆ ನಡೆಸಿವೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ರೀಧರ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News