370ಕ್ಕೂ ಅಧಿಕ ಮಂದಿ ಪರಿಹಾರ ಕೇಂದ್ರದಲ್ಲಿ: ಬಿ.ಎಸ್.ಯಡಿಯೂರಪ್ಪ

Update: 2019-08-12 07:29 GMT

ಮಂಗಳೂರು, ಆ.12: ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕಿನಲ್ಲಿ ನೆರೆಹಾವಳಿ ಯಿಂದ ತೊಂದರೆಯಾಗಿದೆ. ಬೆಳ್ತಂಗಡಿ, ಮೂಡಬಿದ್ರೆ, ಬಂಟ್ವಾಳ, ಪುತ್ತೂರು, ಮಂಗಳೂರಲ್ಲಿ ನೆರೆ ಉಂಟಾಗಿದ್ದು, ದ.ಕ.ಜಿಲ್ಲೆಯ ಐದು ಕಡೆಗಳಲ್ಲಿ ಪರಿಹಾರ ಕೇಂದ್ರ  ತೆರೆಯಲಾಗಿದೆ ಎಂದು ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಕ್ಕೆ ಆಗಮಿಸಿದ ಸಂದರ್ಭದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ೩೭೦ಕ್ಕೂ ಅಧಿಕ ಮಂದಿ  ಪರಿಹಾರ ಕೇಂದ್ರದಲ್ಲಿದ್ದಾರೆ. ದ.ಕ.ಜಿಲ್ಲೆಯ ೪೩೨ ಮನೆಗಳಿಗೆ ಹಾನಿಯಾಗಿದೆ. ೧೪ ಎಕರೆ ಬೆಳೆ ಹಾನಿಯಾಗಿದೆ. ಕೇಂದ್ರದಿಂದ ಹೆಚ್ಚುವರಿ ಅನುದಾನ ಕೋರಲಾಗಿದ್ದು, ತಕ್ಷಣವೇ ೩ ಸಾವಿರ ಕೋಟಿ ಬಿಡುಗಡೆ ಮಾಡಲು ಕೇಂದ್ರಕ್ಕೆ ಕೇಳಿದ್ದೇನೆ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಆಗಸ್ಟ್ ೧೬ರಂದು ದೆಹಲಿಗೆ ಹೋಗುತ್ತೇನೆ. ಈಗಾಗಲೇ ರಾಜ್ಯಕ್ಕೆ ಅಮಿತ್ ಷಾ ಭೇಟಿ ನೀಡಿದ್ದಾರೆ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಆಗಸ್ಟ್‌ 16ರ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಸಚಿವ ಸಂಪುಟ ವಿಸ್ತರಣೆ ಯ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು‌.ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಸರಕಾರದಿಂದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News