ಅನರ್ಹ ಶಾಸಕ ಸುಧಾಕರ್ ಮೇಲೆ ಹಲ್ಲೆ ಆರೋಪ

Update: 2019-08-12 12:06 GMT

ಬೆಂಗಳೂರು, ಆ.12: ಅನರ್ಹ ಶಾಸಕ ಡಾ.ಕೆ.ಸುಧಾಕರ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ವಿಧಾನಪರಿಷತ್ ಸದಸ್ಯ ನಝೀರ್ ಅಹಮದ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಜು.10ರಂದು ವಿಧಾನಸೌಧ‌ದಲ್ಲಿ ಅನರ್ಹ ಶಾಸಕ ಸುಧಾಕರ್ ಅವರು ಸ್ಪೀಕರ್ ಗೆ ರಾಜೀನಾಮೆ ಸಲ್ಲಿಕೆ ಪ್ರಕ್ರಿಯೆ ವೇಳೆ, ಅವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ನಝೀರ್ ಅಹ್ಮದ್ ಸೇರಿ ಇತರರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಎನ್ನಲಾಗಿದೆ.

ಈ ಸಂಬಂಧ  ಎಫ್ಐಆರ್ ದಾಖಲಿಸಿಕೊಂಡು ವಿಧಾನಸೌಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News