×
Ad

ಬಿಹಾರದ ದೇವಸ್ಥಾನದಲ್ಲಿ ಕಾಲ್ತುಳಿತ: ಓರ್ವ ಮಹಿಳೆ ಬಲಿ, 14 ಮಂದಿಗೆ ಗಾಯ

Update: 2019-08-12 20:01 IST

ಪಾಟ್ನಾ, ಆ.12: ಬಿಹಾರದ ಲಖಿಸರೈ ಜಿಲ್ಲೆಯಲ್ಲಿನ ಖ್ಯಾತ ಶಿವ ದೇವಾಲಯದಲ್ಲಿ ಸೋಮವಾರ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 60 ವರ್ಷದ ವೃದ್ದೆ ಸಾವನ್ನಪ್ಪಿದರೆ, ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ.

ಶ್ರಾವಣ ಮಾಸದ ಕೊನೆಯ ಸೋಮವಾರ ಅಶೋಕಧಾಮನ ಇಂದ್ರಮುನೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾವಿರಾರು ಭಕ್ತರು ನೆರೆದಿದ್ದರು. ಜನರನ್ನು ನಿಯಂತ್ರಿಸಲು ವಿಫಲವಾದ ಕಾರಣ ನೂಕುನುಗ್ಗಲು ಸಂಭವಿಸಿ ಈ ಅನಾಹುತ ಸಂಭವಿಸಿದೆ.

ದೇವಾಲಯದಲ್ಲಿ ಯಾವುದೇ ಕಾಲ್ತುಳಿತ ಸಂಭವಿಸಿಲ್ಲ. ಹಿರಿಯ ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಜಿಲ್ಲಾಡಳಿತ ಹೇಳಿದೆ. ಸ್ಥಳೀಯರು ಹಾಗೂ ಪ್ರತ್ಯಕ್ಷದರ್ಶಿಗಳು ಜಿಲ್ಲಾಡಳಿತ ಹೇಳಿಕೆಯನ್ನು ಖಂಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News