ಆ.13, 14ರಂದು ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

Update: 2019-08-13 07:04 GMT

ಚಿಕ್ಕಮಗಳೂರು, ಆ.13: ಭಾರೀ ನೆರೆ ಪೀಡಿತ ಚಿಕ್ಕಮಗಳೂರು ಜಿಲ್ಲೆಯ ಐದು ತಾಲೂಕುಗಳಲ್ಲಿ ಆ.13 ಮತ್ತು 14ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

 ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ನೆರೆಯಿಂದ ಹಲವು ರಸ್ತೆಗಳ ಸಂಪರ್ಕಗಳು ಕಡಿತಗೊಂಡಿವೆ. ಇದಲ್ಲದೆ ಸಂತ್ರಸ್ತರಿಗಾಗಿ ಕೆಲವು ಶಾಲೆಗಳಲ್ಲಿ ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಹಾಗೂ ನರಸಿಂಹರಾಜುಪುರ ತಾಲೂಕುಗಳ ಎಲ್ಲ ಶಾಲಾ ಕಾಲೇಜುಗಳಿಗೆ ಆ.13 ಮತ್ತು 14ರಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಾಗದಿ ಗೌತಮ್ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News