ಶಾಸಕರ ರಾಜೀನಾಮೆ ಅಂಗೀಕಾರಕ್ಕೆ ನಿರ್ದೇಶನ ನೀಡಲು ಅರ್ಜಿ: ಮಧ್ಯಪ್ರವೇಶಿಸಲು ನಿರಾಕರಿಸಿದ ಹೈಕೋರ್ಟ್

Update: 2019-08-13 15:28 GMT

ಬೆಂಗಳೂರು, ಆ.13: ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ತಕ್ಷಣ ಅಂಗೀಕರಿಸಲು ವಿಧಾನಸಭೆ ಸ್ಪೀಕರ್ ಅವರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಗೊಳಿಸಿದೆ.

ವಕೀಲ ನಟರಾಜ್ ಶರ್ಮಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಈ ವೇಳೆ ನ್ಯಾಯಪೀಠ ಇದೀಗ ನೂತನ ಸರಕಾರ ರಚನೆಯಾಗಿದೆ. ಅಲ್ಲದೆ, ಅನರ್ಹಗೊಂಡಿರುವ ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿದೆ. ಹೀಗಾಗಿ, ಹೈಕೋರ್ಟ್ ಮಧ್ಯಪ್ರವೇಶಿಸಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿಯನ್ನು ಇತ್ಯರ್ಥಗೊಳಿಸಿತು.

ಸಮ್ಮಿಶ್ರ ಸರಕಾರ ಇದ್ದಾಗ ಅತೃಪ್ತ ಶಾಸಕರು ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಅಂಗೀಕರಿಸಲು ತಡ ಮಾಡುತ್ತಿದ್ದಾರೆ. ವಿಳಂಬ ನೀತಿಯನ್ನು ಅನುಸರಿಸಿದರೆ ಸಮಾಜದಲ್ಲಿ ಗದ್ದಲದ ವಾತಾವರಣ ಉಂಟಾಗುತ್ತದೆ. ಹೀಗಾಗಿ, ಈ ಕೂಡಲೆ ರಾಜೀನಾಮೆ ಅಂಗೀಕರಿಸಲು ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News