ಆ.16: ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ‘ಅರಣ್ಯ ಕೃಷಿ’ ಬಗ್ಗೆ ವಿಚಾರ ಸಂಕಿರಣ

Update: 2019-08-13 16:51 GMT

ಮಣಿಪಾಲ, ಆ.13: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ಮತ್ತು ಸೆಲ್ಕೋ ಪೌಂಡೇಶನ್ ಬೆಂಗಳೂರು ಜಂಟಿಯಾಗಿ ದಿ.ಕೆ.ಎಂ.ಉಡುಪರ ನೆನಪಿನಲ್ಲಿ ಬಿವಿಟಿಯಲ್ಲಿ ಸಂಪನ್ಮೂಲ ಕೇಂದ್ರವೊಂದನ್ನು ಸ್ಥಾಪಿಸುವ ಯೋಜನೆ ಯನ್ನು ಹಾಕಿಕೊಂಡಿದ್ದು, ಇದಕ್ಕೆ ಪೂರ್ವಭಾವಿಯಾಗಿ ಕೃಷಿ ಮತ್ತು ಸ್ವ ಉದ್ಯೋಗ ಕ್ಷೇತ್ರಗಳಲ್ಲಿಅನೇಕ ರಚನಾತ್ಮಕ ಕಾರ್ಯಕ್ರಮಗನ್ನು ಹಮ್ಮಿಕೊಳ್ಳಲು ನಿರ್ದರಿಸಿವೆ.

ಈ ಪ್ರಯತ್ನದ ಮೊದಲ ಭಾಗವಾಗಿ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ಇದೇ ಆ.16ರ ಶುಕ್ರವಾರ ‘ಅರಣ್ಯ ಕೃಷಿ’ ಬಗ್ಗೆ ಒಂದು ದಿನದ ವಿಚಾರ ಸಂಕಿರಣವನ್ನು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ  ಸಭಾಂಗಣ ದಲ್ಲಿ ಆಯೋಜಿಸಲಾಗಿದೆ.

ಈ ವಿಚಾರ ಸಂಕಿರಣದಲ್ಲಿ ಪೊನ್ನಂಪೇಟೆಯ ಅರಣ್ಯ ಮಹಾ ವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ರಾಮಕೃಷ್ಣ ಹೆಗಡೆ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಲಿದ್ದಾರೆ. ಆಸಕ್ತ ಕೃಷಿಕರು ಈ ವಿಚಾರಸಂಕಿರಣದಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಳ್ಳಬಹುದು.

ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ವಿರುತ್ತದೆ. ಮಾಹಿತಿಗಾಗಿ ಆಸಕ್ತರು ಬಿವಿಟಿಯನ್ನು (0820-2563926, 2570263) ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News