ನಂತೂರು: ಶಾಲಾ ಬಸ್ ಮೇಲೆ ಬಿದ್ದ ಮರ

Update: 2019-08-14 07:04 GMT

ಮಂಗಳೂರು: ಶಾಲಾ ಬಸ್‌ ಮೇಲೆ ಮರ ಬಿದ್ದ ಘಟನೆ ನಂತೂರು ವೃತ್ತದ ಬಳಿ ಇಂದು ಬೆಳಗ್ಗೆ ನಡೆದಿದೆ. 

ಬಸ್ ನಲ್ಲಿ ಸುಮಾರು 17 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ  ಶಾಲೆಯ ಪ್ರಾಂಶುಪಾಲರು ಮಾತನಾಡಿದ್ದು, ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಡಿಸಿಪಿ ಮತ್ತು ಇತರ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News