ಸಾಮಾಜಿಕ ಜಾಲತಾಣಗಳಲ್ಲಿ ರಮಾನಾಥ ರೈ ತೆಜೋವಧೆ: ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು

Update: 2019-08-14 11:55 GMT

ಬಂಟ್ವಾಳ, ಆ. 14: ಮಾಜಿ ಸಚಿವ ಬಿ. ರಮಾನಾಥ ರೈ ಅವರ ತೆಜೋವಧೆ ಹಾಗೂ ಅಳಹೇಳನ ಮಾಡಿರುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ ಎಂದು ಆರೋಪಿಸಿ ಬಂಟ್ವಾಳ ಕಾಂಗ್ರೆಸ್ ಸಮಿತಿ ವತಿಯಿಂದ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಲಾಯಿತು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಬೇಬಿ ಕುಂದರ್ ನಿಯೋಗವು ಠಾಣೆ ಎಸ್ಸೈ ಪ್ರಸನ್ನ ಅವರಿಗೆ ಈ ದೂರು ನೀಡಿದೆ.

ದೂರಿನಲ್ಲೇನಿದೆ ?

ತೀವ್ರ ಮಳೆಯಿಂದಾಗಿ ನೆರೆಪೀಡಿತ ಪ್ರದೇಶಗಳಿಗೆ ಮಾಜಿ ಶಾಸಕ ರಮಾನಾಥ ರೈ ಅವರ ದೋಣಿಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ, ಇದರ ವೀಡಿಯೊವನ್ನು ತಿರುಚಿ ಗಣಪತಿ ದೇವರ ವಿಸರ್ಜನೆಯ ರೂಪದಲ್ಲಿ ವ್ಯಂಗ್ಯವನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ. ಹಿಂದೂ ಆರಾಧ್ಯ ದೇವರ ಅಪಹಾಸ್ಯ ಮಾಡಿ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆಯಾಗಿದ್ದು, ಕಿಡಿಗೇಡಿಗಳನ್ನು ಶೀಘ್ರವೇ ಬಂಧಿಸಿ, ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪುರಸಭಾ ಸದಸ್ಯರಾದ ಗಂಗಾಧರ್ ಪೂಜಾರಿ ಹಾಗೂ ಲೋಲಾಕ್ಷ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News