×
Ad

ಮಲ್ಲಳ್ಳಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿತ

Update: 2019-08-14 17:42 IST

ಮಡಿಕೇರಿ, ಆ.14: ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಅಪಾಯಕಾರಿ ಸ್ಥಿತಿಯಲ್ಲಿದ್ದು, ಸೇತುವೆ ಎರಡು ಬದಿ ಕುಸಿತ ಉಂಟಾಗಿದೆ.

ಶಾಂತಳ್ಳಿ ಹೋಬಳಿಯ ಬೆಟ್ಟದಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ವಾರಗಳ ಕಾಲ ಧಾರಾಕಾರ ಮಳೆ ಸುರಿದ ಹಿನ್ನೆಲೆಯಲ್ಲಿ ಕುಮಾರಳ್ಳಿ ಹೊಳೆ ಭೋರ್ಗೆರೆದು ಕಳೆದ ನಾಲ್ಕು ವರ್ಷಗಳ ಹಿಂದೆ ನಿರ್ಮಾಣವಾದ ಸೇತುವೆಗೆ ಅಪಾಯ ತಂದೊಡ್ಡಿದೆ.

ಈಗ ವರುಣನ ಆರ್ಭಟ ಕಡಿಮೆಯಾಗಿದ್ದು, ಮಲ್ಲಳ್ಳಿ ಜಲಪಾತಕ್ಕೆ ಪ್ರವಾಸಿಗರು ಆಗಮಿಸುತ್ತಾರೆ. ಈ ರಸ್ತೆಯಲ್ಲಿ ಬೃಹತ್ ವಾಹನಗಳು ಸಂಚರಿಸಿದರೆ, ಅಪಾಯ ನಿಶ್ಚಿತ ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News