'ಫೋನ್ ಕದ್ದಾಲಿಕೆ' ಆರೋಪದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ?

Update: 2019-08-14 13:54 GMT

ಬೆಂಗಳೂರು, ಆ. 14: ‘ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ಈ ಸಂಬಂಧ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ‘ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು’ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News