ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಟ್ಟಡಗಳ ಕುರಿತು ವರದಿ ನೀಡಿ: ಸಿಇಒ

Update: 2019-08-14 15:11 GMT

ಉಡುಪಿ, ಆ.14: ಜಿಲ್ಲೆಯಲ್ಲಿರುವ ಎಲ್ಲಾ ಸರಕಾರಿ ಅಂಗನವಾಡಿ, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲಾ ಕಟ್ಟಡಗಳ ಸ್ಥಿತಿಗತಿ ಕುರಿತು ವರದಿ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ. ರೂಪೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 ಬುಧವಾರ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷ ದಿನಕರಬಾಬು ಅಧ್ಯಕ್ಷತೆಯಲ್ಲಿ ನಡೆದ ಜುಲೈ ತಿಂಗಳ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.

ಈ ಬಾರಿಯ ಮಳೆಯಲ್ಲಿ ಇದುವರೆಗೆ ಜಿಲ್ಲೆಯ 9 ಶಾಲಾ ಕಟ್ಟಡಗಳಿಗೆ ಹಾನಿಯಾಗಿರುವ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಇಒ, ಜಿಲ್ಲೆಯ ಎಲ್ಲಾ ಸರಕಾರಿ ಶಾಲೆ ಮತ್ತು ಅಂಗನವಾಡಿ ಕಟ್ಟಡಗಳ ಪ್ರಸ್ತುತ ಸ್ಥಿತಿಗತಿ ಮತ್ತು ಅಗತ್ಯ ದುರಸ್ತಿ ಕುರಿತಂತೆ ಸಮಗ್ರ ವರದಿ ನೀಡುವಂತೆ ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಬಾಗದ ಅಧಿಕಾರಿ ಗಳಿಗೆ ಸೂಚಿಸಿದರು. ಶಾಲೆ ಬಿಟ್ಟ ಮಕ್ಕಳ ಸಮಗ್ರ ಮಾಹಿತಿ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೂ ಸೂಚಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಗ್ರಾಪಂ ಮಟ್ಟದ ಕೆಡಿಪಿ ಸಭೆಗಳು ಮುಕ್ತಾಯ ವಾಗಿದ್ದು, ಈ ಸಭೆಗಳ ನಡವಳಿಗಳನ್ನು ಪರಿಶೀಲಿಸಿ ಪ್ರಮುಖ ಸಮಸ್ಯೆಗಳನ್ನು ಪಟ್ಟಿ ಮಾಡಿ, ತಾಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಎಲ್ಲಾ ತಾಲೂಕುಗಳ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸಿಂಧೂ ಬಿ. ರೂಪೇಶ್ ಸೂಚಿಸಿದರು.
ಅಲೆವೂರು ಗ್ರಾಪಂ ಕಟ್ಟಡ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ತಮ್ಮ ತೀವ್ರ ಅಸಮಧಾನ ವ್ಯಕ್ತಪಡಿಸಿದ ಅಧ್ಯಕ್ಷ ದಿನಕರಬಾಬು, ಶೀಘ್ರದಲ್ಲಿ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗೆ ಖಡಕ್ ಸೂಚನೆ ನೀಡಿದರು.

ಅಲೆವೂರು ಗ್ರಾಪಂ ಕಟ್ಟಡ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ತಮ್ಮ ತೀವ್ರ ಅಸಮಾನವ್ಯಕ್ತಪಡಿಸಿದಅ್ಯಕ್ಷ ದಿನಕರಬಾಬು, ಶೀಘ್ರದಲ್ಲಿ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗೆ ಖಡಕ್ ಸೂಚನೆ ನೀಡಿದರು. ಸರಕಾರಕ್ಕೆ ಪ್ರಸ್ತಾವನೆ: ಮೀನುಗಾರರ ಸಾಲ ಮನ್ನಾ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಶೇ.2ರ ಬಡ್ಡಿದರದಲ್ಲಿ ಮೀನುಗಾರಿಕಾ ಚಟುವಟಿಕೆ ಗಳಿಗೆ ಸಾಲ ಪಡೆದ 20,300 ಮಂದಿ ಮೀನುಗಾರರ ಒಟ್ಟು 55 ಕೋಟಿ ರೂ. ಸಾಲ ಮನ್ನಾ ಆಗಿದ್ದು, ಮಳೆಯಿಂದ ಹಾನಿಗೊಳಗಾದ ಕೇಜ್ ಮೀನುಗಾರಿಕೆಗೆ ಸಂಕಷ್ಟ ಪರಿಹಾರ ಯೋಜನೆಯಡಿ ಪರಿಹಾರ ನೀಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕ ಪಾರ್ಶ್ವನಾಥ್ ಮಾಹಿತಿ ನೀಡಿದರು.

ಮೀನುಗಾರರ ಸಾಲ ಮನ್ನಾ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಶೇ.2ರ ಬಡ್ಡಿದರದಲ್ಲಿ ಮೀನುಗಾರಿಕಾ ಚಟುವಟಿಕೆ ಗಳಿಗೆ ಸಾಲ ಪಡೆದ 20,300 ಮಂದಿ ಮೀನುಗಾರರ ಒಟ್ಟು 55 ಕೋಟಿ ರೂ. ಸಾಲ ಮನ್ನಾ ಆಗಿದ್ದು, ಮಳೆಯಿಂದ ಹಾನಿಗೊಳಗಾದ ಕೇಜ್ ಮೀನುಗಾರಿಕೆಗೆ ಸಂಕಷ್ಟ ಪರಿಹಾರ ಯೋಜನೆಯಡಿ ಪರಿಹಾರ ನೀಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕ ಪಾರ್ಶ್ವನಾಥ್ ಮಾಹಿತಿ ನೀಡಿದರು.

ಆರೋಗ್ಯ ಇಲಾಖೆ ವತಿಯಿಂದ ಮಲೇರಿಯಾ ರೋಗ ತಡೆಗೆ, ರ್ಯಾಪಿಡ್ ರೆಸ್ಪಾನ್ಸ್ ತಂಡದ ಮೂಲಕ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ರೋಗ ನಿರೋಧಕ ಓಆರ್‌ಎಸ್, 108 ಆಂಬ್ಯಲೆನ್ಸ್ ಸೇವೆ ಹಾಗೂ ಇತರ ತುರ್ತು ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ಡಾ.ರಾಮರಾವ್ ತಿಳಿಸಿದರು.

ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ 1167 ಹೆಕ್ಟೆರ್ ಭತ್ತದ ಕೃಷಿ ಪ್ರದೇಶ ಜಲಾವೃತಗೊಂಡಿದೆ. 263 ಹೆಕ್ಟೇರ್ ಬೆಳೆ ಹಾನಿ ವರದಿಯಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದರು.ಕೃಷಿ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಜಲಾವೃತಗೊಂಡ ಕೃಷಿಭೂಮಿಯ ಪರಿಶೀಲನೆ ನಡೆಸುತ್ತಿದ್ದು, ಶೇ.33ಕ್ಕಿಂತ ಹೆಚ್ಚಿನ ಹಾನಿಗೆ ಪರಿಹಾರ ನೀಡಲಾ ಗುತ್ತದೆ. ಈ ಬಾರಿ 2330 ಕ್ವಿಂಟಾಲ್ ಭತ್ತದ ಬೀಜ ವಿತರಣೆ ಗುರಿ ಹೊಂದಿದ್ದು, 2100 ಕ್ವಿಂಟಲ್ ಭತ್ತದ ಬೀಜ ವಿತರಿಸಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿ ಸತೀಶ್ ಮಾಹಿತಿ ನೀಡಿದರು.

ಭಾರೀ ಮಳೆಗೆ ಜಿಲ್ಲೆಯಲ್ಲಿ 6.2 ಹೆಕ್ಟೇರ್ ತೋಟಗಾರಿಕಾ ಬೆಳೆ ಹಾನಿ ಯಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಮಾಹಿತಿ ನೀಡಿದರು. ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಉದ್ದಿಮೆ ಮತ್ತು ಸಂಸ್ಥೆಗಳ ತನಿಖೆ ನಡೆಸಿ ಕಾರ್ಮಿಕರ ಸುರಕ್ಷತೆ ಕುರಿತು ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸುವಂತೆ ಅಧ್ಯಕ್ಷರು ಸೂಚಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ್ ಪಡುಬಿದ್ರೆ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಕೃಷಿ ಮತುತಿ ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್ ಕೋಟ್ಯಾನ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಪಂ ಯೋಜನಾ ನಿರ್ದೇಶಕ ಮಧುಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News