ಉತ್ತಮ ಶಿಕ್ಷಕ ಪ್ರಶಸ್ತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Update: 2019-08-14 16:32 GMT

ಬೆಂಗಳೂರು, ಆ.14: ಪ್ರಸಕ್ತ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಹಾಗೂ ತಾಲೂಕು ಮತ್ತು ಜಿಲ್ಲಾ ಆಯ್ಕೆ ಸಮಿತಿಗೆ ಆಯ್ಕೆ ಪ್ರಕ್ರಿಯೆಗೆ ನೀಡಲಾಗಿದ್ದ ಅವಧಿ ವಿಸ್ತರಣೆ ಮಾಡಲಾಗಿದೆ.

ರಾಜ್ಯದಲ್ಲಿ ತಲೆದೋರಿರುವ ನೆರೆ ಹಾವಳಿಯಿಂದ ಬಹಳಷ್ಟು ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರಿಗೆ ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿದೆ. ಆದುದರಿಂದಾಗಿ, ಕಾಲಮಿತಿಯನ್ನು ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಆ.18 ಹಾಗೂ ತಾಲೂಕು ಮಟ್ಟದ ಆಯ್ಕೆ ಸಮಿತಿ ಪ್ರಕ್ರಿಯೆಗಾಗಿ ಆ.19 ರಿಂದ 22 ರವರೆಗೂ ವಿಸ್ತರಿಸಲಾಗಿದೆ. ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗಳಿಗೆ ಆ.23 ರಿಂದ ಆ.26 ರವರೆಗೂ ಅವಕಾಶ ನೀಡಿದ್ದು, ಆ.27 ರವರೆಗೆ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗಳು ಅನುಮೋದಿತ ಪ್ರಸ್ತಾವನೆಗಳನ್ನು ಆಯುಕ್ತರ ಕಚೇರಿಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News