ಉಡುಪಿ; ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಜಿನೇವಾ ಒಪ್ಪಂದ, ನಿಧಿ ಸಂಗ್ರಹ

Update: 2019-08-14 16:34 GMT

ಉಡುಪಿ, ಆ.14: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಜಿನೇವಾ ಒಪ್ಪಂದ ಮತ್ತು ನಿಧಿ ಸಂಗ್ರಹಣಾ ಜಾಥಾ ಕಾರ್ಯಕ್ರಮ ಮಂಗಳವಾರ ಇಲ್ಲಿ ನಡೆಯಿತು. ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಈ ಬೃಹತ್ ನಿಧಿ ಸಂಗ್ರಹಣಾ ಜಾಥಾ ಕಾರ್ಯಕ್ರಮವನ್ನು ಉಡುಪಿ ಶಾಸ ಕೆ.ರಘುಪತಿ ಭಟ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಂಬಲಪಾಡಿ ಶ್ರೀಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಎನ್.ಬಿ. ವಿಜಯ ಬಲ್ಲಾಳ್ ರೆಡ್‌ಕ್ರಾಸ್ ಬಾವುಟ ಬೀಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಡಿವೈಎಸ್ಪಿಟಿ.ಆರ್.ಜೈಶಂಕರ್, ರೆಡ್‌ಕ್ರಾಸ್ ಆಡಳಿತ ಸಮಿತಿ ಸದಸ್ಯ ಬಸ್ರೂರು ರಾಜೀವ್ ಶೆಟ್ಟಿ, ರೆಡ್‌ಕ್ರಾಸ್ ಉಡುಪಿ ಜಿಲ್ಲಾ ಘಟಕದ ಸಬಾಪತಿ ಡಾ. ಉಮೇಶ್ ಪ್ರೊ. ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ, ಗೌರವ ಖಜಾಂಚಿ ಟಿ. ಚಂದ್ರಶೇಖರ್, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದೇಶಕ ರೋಶನ್ ಕುಮಾರ್, ಡಾ.ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಾಲ ಬಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.

ಉಡುಪಿ ಪರಿಸರದ ಮಾಧವ ಪೈ ಸ್ಮಾರಕ ಕಾಲೇಜು ಮಣಿಪಾಲ, ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ, ಉಡುಪಿ ಧನ್ವಂತರಿ ನರ್ಸಿಂಗ್ ಕಾಲೇಜು ಉಡುಪಿ, ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು, ಎಸ್‌ಎಂಎಸ್ ಕಾಲೇಜು ಬ್ರಹ್ಮಾವರ ಮತ್ತು ವೈಕುಂಠ ಬಾಳಿಗಾ ಲಾ ಕಾಲೇಜುಗಳ ವಿದ್ಯಾರ್ಥಿ ಗಳು ಜಾಥಾದಲ್ಲಿ ಪಾಲ್ಗೊಂಡು ನಿಧಿ ಸಂಗ್ರಹಣಾ ಕಾರ್ಯಕ್ಕೆ ಸಹಕಾರವನ್ನು ನೀಡಿದರು.

ಜಾಥಾದಲ್ಲಿ 4,27,263 ರೂ. ಮೊತ್ತವನ್ನು ಸಂಗ್ರಹಿಸಲಾಗಿದ್ದು, ಕಾಲೇಜಿನ ಅಧಿಕೃತ ಪ್ರತಿನಿಧಿಗಳ ಸಮ್ಮುಖದಲ್ಲಿ ಸೀಲ್ಡ್ ಬಾಕ್ಸ್‌ನ್ನು ತೆರೆದು ಲೆಕ್ಕ ಮಾಡಲಾಯಿತು. ನಿಧಿ ಸಂಗಹಣಾ ಜಾಥಾದಲ್ಲಿ ಪಾಲ್ಗೊಂಡ ಕಾಲೇಜುಗಳ ಪೈಕಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಗರಿಷ್ಠ ಮೊತ್ತದ ನಿಧಿ ಸಂಗ್ರಹಣೆ ಮಾಡಿದ್ದು ಪ್ರಥಮ ಬಹುಮಾನ ಪಡೆದರು.

ಮಾಧವ ಪೈ ಸ್ಮಾರಕ ಕಾಲೇಜು ಮಣಿಪಾಲ ಎರಡನೇ ಹಾಗೂ ಬಾರಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ ಬಹುಮಾನ ಪಡೆದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News