ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆಗೆ ಭಾರತ ಸಿದ್ಧತೆ

Update: 2019-08-14 17:05 GMT

ಮುಝಫರಾಬಾದ್ (ಪಾಕ್ ಆಕ್ರಮಿತ ಕಾಶ್ಮೀರ), ಆ. 14: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ನಡೆಸಲು ಭಾರತ ಯೋಜನೆ ರೂಪಿಸುತ್ತಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಬುಧವಾರ ಆರೋಪಿಸಿದ್ದಾರೆ.

ಅವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಝಫರಾಬಾದ್‌ನಲ್ಲಿ ನಡೆದ ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

‘‘ಪಾಕಿಸ್ತಾನಿ ಕಾಶ್ಮೀರದಲ್ಲಿ ಏನನ್ನೋ ಮಾಡಲು ಅವರು ಯೋಜನೆ ರೂಪಿಸುತ್ತಿದ್ದಾರೆ ಎನ್ನುವ ಮಾಹಿತಿ ಪಾಕಿಸ್ತಾನಿ ಸೇನೆಗೆ ಲಭ್ಯವಾಗಿದೆ. ಅವರು ತಯಾರಾಗಿದ್ದಾರೆ ಹಾಗೂ ನಾವು ಅದಕ್ಕೆ ಸರಿಯಾದ ಪ್ರತಿಕ್ರಿಯೆಯನ್ನು ನೀಡುತ್ತೇವೆ’’ ಎಂದು ಇಮ್ರಾನ್ ಹೇಳಿದರು ಎಂದು ಎಎಫ್‌ಪಿ ವರದಿ ಮಾಡಿದೆ.

‘‘ಕಾಶ್ಮೀರದಲ್ಲಿ ಕರ್ಫ್ಯೂ ಅಡಿಯಲ್ಲಿ ಅವರು ಏನು ಮಾಡುತ್ತಿದ್ದಾರೋ, ಅದರಿಂದ ವಿಶ್ವದ ಗಮನವನ್ನು ಬೇರೆಡೆಗೆ ಸೆಳೆಯಲು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ನಡೆಸಲು ಭಾರತ ಬಯಸಿದೆ’’ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News