ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಹೆಚ್ಚುವರಿ ಅನುದಾನ: ಸಚಿವ ಸಂಪುಟ ಸಭೆ ತೀರ್ಮಾನ

Update: 2019-08-14 17:05 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.14: ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬುಧವಾರ ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಾರೆ.

ಎನ್.ಡಿ.ಆರ್.ಎಫ್.ನ 6,200 ರೂ.ಗಳೊಂದಿಗೆ ರಾಜ್ಯ ಸರಕಾರದ 3,800 ರೂ.ಗಳನ್ನು ಸೇರಿಸಿ ಒಟ್ಟು 10 ಸಾವಿರ ರೂ.ಗಳನ್ನು ಪ್ರವಾಹ ಸಂತ್ರಸ್ತರಿಗೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದಲ್ಲದೇ, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗವನ್ನು 956 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಶಿವಮೊಗ್ಗ ಕಿರು ವಿಮಾನ ಇಳಿದಾಣವನ್ನು ರಾಜ್ಯ ಸರಕಾರದ ಕೆ.ಎಸ್.ಐ.ಐ.ಡಿ.ಸಿ ಸಂಸ್ಥೆಯ ಮೂಲಕ 38 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ 66 ಸಂಖ್ಯೆಯ ಸಣ್ಣ ನೀರಾವರಿ/ ಜಿಲ್ಲಾ ಪಂಚಾಯತ್ ಕೆರೆಗಳನ್ನು ಮೂಡಿ ಗ್ರಾಮದ ಹತ್ತಿರ ವರದಾ ನದಿಯಿಂದ ನೀರನ್ನೆತ್ತಿ ತುಂಬಿಸುವ 285 ಕೋಟಿ ರೂ.ಗಳ ಮುಡಿ ಯೋಜನಾ ವರದಿಗೆ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಮೆ: ಸತಾರೆಂ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯವರಿಗೆ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಾಪಿಸಲು ಬಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಶದಲ್ಲಿರುವ ಕನ್ನಹಳ್ಳಿಯಲ್ಲಿರುವ ಘನತ್ಯಾಜ್ಯ ಘಟಕದಲ್ಲಿನ 20 ಎಕರೆ ಜಾಗವನ್ನು 30 ವರ್ಷಗಳ ಅವಧಿಗೆ ಉಪಯೋಗಕ್ಕೆ ಮಾತ್ರ ಆಧಾರದ ಮೇಲೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News