ವೋಟರ್ ಐಡಿ ಪತ್ತೆ ಪ್ರಕರಣ: ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್ ಪಡೆದ ದೂರುದಾರ

Update: 2019-08-14 17:23 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.14: ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ವೋಟರ್ ಐಡಿ ಪತ್ತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ದೂರುದಾರ ರಾಕೇಶ್ ವಾಪಸ್ ಪಡೆದುಕೊಂಡಿದ್ದಾರೆ.

ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಅಲೋಕ್ ಆರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ಅರ್ಜಿ ವಿಚಾರಣೆಗೆ ಬಂದಿತ್ತು. ದೂರುದಾರರ ಪರ ವಕೀಲರು, ವಿಚಾರಣೆ ಪ್ರಾರಂಭವಾಗುತ್ತಿದ್ದಂತೆಯೇ ಪೀಠಕ್ಕೆ ತಿಳಿಸಿ, ಅರ್ಜಿ ವಾಪಸ್ ಪಡೆದುಕೊಂಡರು.

ವೋಟರ್ ಐಡಿ ಪತ್ತೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಹಸ್ತಾಂತರಿಸಲು ವಿಳಂಬವಾಗುತ್ತಿರುವುದರಿಂದ ಸಾಕ್ಷಿಗಳು ನಾಶವಾಗುತ್ತಿವೆ. ಜಾಲಹಳ್ಳಿ ಪೊಲೀಸರು ತನಿಖೆಯನ್ನು ಸರಿಯಾಗಿ ನಡೆಸುತ್ತಿಲ್ಲ. ವೋಟರ್ ಐಡಿ ಪತ್ತೆಯಾದ ಜಾಗದಲ್ಲಿ ಸಿಸಿ ಕ್ಯಾಮರಾ ಇತ್ತು. ಆ ಕ್ಯಾಮರಾವನ್ನು ವಶಕ್ಕೆ ಪಡೆಯಲು ಪೊಲೀಸರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ಈ ಮೊದಲು ಪೀಠಕ್ಕೆ ತಿಳಿಸಿದ್ದರು.

ಅಲ್ಲದೆ, ವೋಟರ್ ಐಡಿ ಪತ್ತೆ ಪ್ರಕರಣವನ್ನು ವಾಪಸ್ ಪಡೆದುಕೊಳ್ಳಲು ಬೆದರಿಕೆ ಹಾಕುತ್ತಿದ್ದಾರೆ. ಹೀಗಾಗಿ, ತಮಗೆ ಪೊಲೀಸ್ ಭದ್ರತೆ ನೀಡಬೇಕೆಂದು ಅರ್ಜಿದಾರ ರಾಕೇಶ್ ಹೈಕೋರ್ಟ್ ಮುಂದೆ ಮನವಿಯನ್ನೂ ಮಾಡಿದ್ದರು. ಆದರೆ, ನ್ಯಾಯಪೀಠವು ಕೆಲವು ತಿಂಗಳುಗಳ ಕಾಲ ಪೊಲೀಸ್ ಭದ್ರತೆಗೆ ನಿರ್ದೇಶಿಸಿ, ಬಳಿಕ ಭದ್ರತೆ ಮುಂದುವರಿಸಲು ಆದೆೀಶಿಸಲು ನಿರಾಕರಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News