ಗೋಡೆ ಕುಸಿದು ತಾಯಿ-ಮಗು ಮೃತ್ಯು

Update: 2019-08-14 18:36 GMT

ದಾವಣಗೆರೆ, ಆ.14: ಗೋಡೆ ಕುಸಿದು ತಾಯಿ-ಮಗು ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.

ತಾಯಿ ಉಮಾ (30) ಹಾಗೂ ಮಗು ಧನುಷ್( 1) ಮೃತರು ಎಂದು ಗುರುತಿಸಲಾಗಿದೆ.

ಬೆಳಗಿನ ಜಾವ ಗೋಡೆ ಕುಸಿತವಾಗಿ ಈ ಘಟನೆ ನಡೆದಿದೆ. ಮಲಗಿದ್ದ ತಾಯಿ-ಮಗು ಮೇಲೆ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದ ಕಾರಣ ಇಬ್ಬರೂ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News