ಕಾಶ್ಮೀರದ ಜನರ ಕನಸುಗಳಿಗೆ ರೆಕ್ಕೆ ನೀಡುವುದು ನಮ್ಮೆಲ್ಲರ ಜವಾಬ್ದಾರಿ: ಪ್ರಧಾನಿ ಮೋದಿ

Update: 2019-08-15 15:37 GMT

ಹೊಸದಿಲ್ಲಿ, ಆ.15: ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್‌ನ ಜನರ ಕನಸುಗಳಿಗೆ ರೆಕ್ಕೆ ನೀಡಲು ನೆರವಾಗುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ತಿಳಿಸಿದ್ದಾರೆ. ಭಾರತದ 73ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ದಿಲ್ಲಿಯ ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಕಾಶ್ಮೀರದ 370ನೇ ವಿಧಿ ಮತ್ತು 35ಎ ವಿಧಿಯನ್ನು ರದ್ದುಗೊಳಿಸುವಲ್ಲಿ ಯಾವುದೇ ವೈಯಕ್ತಿಕ ಸಿದ್ಧಾಂತ ಅಡಗಿರಲಿಲ್ಲ ಮತ್ತು ನಾನು ಕೇವಲ ಜನರು ನನಗೆ ನೀಡಿದ್ದ ಕೆಲಸವನ್ನಷ್ಟೇ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಆಗಸ್ಟ್ 5ರಂದು 370ನೇ ವಿಧಿಯ ಕೆಲವೊಂದು ನಿಬಂಧನೆಗಳನ್ನು ರದ್ದುಗೊಳಿಸಿದ ಕೇಂದ್ರ ಸರಕಾರ ಆಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿತ್ತು ಮತ್ತು ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಂಗಡಿಸಿತ್ತು. ಇದಕ್ಕೆ ಸಂಬಂಧಿಸಿದ ಮಸೂದೆಯು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಮೂರನೇ ಎರಡು ಮತಗಳಿಂದ ಅಂಗೀಕಾರಗೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News