ತೆಂಗಿನಮರದಿಂದ ಬಿದ್ದು ಮೃತ್ಯು

Update: 2019-08-15 15:49 GMT

ಕಾರ್ಕಳ, ಆ.15: ತೆಂಗಿನ ಮರದಿಂದ ಶೇಂದಿ ತೆಗೆಯುತ್ತಿದ್ದಾಗ ವ್ಯಕ್ತಿ ಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸೂಡ ಗ್ರಾಮದ ಮಕ್ಕೇರಿಬೈಲ್ ಎಂಬಲ್ಲಿ ನಡೆದಿದೆ.

ಮೃತರನ್ನು ಉಮಿಲ ಕೋಟ್ಯಾನ್ (72) ಎಂದು ಗುರುತಿಸಲಾಗಿದೆ.

ಇವರು ಆ.14ರಂದು ಮಧ್ಯಾಹ್ನ ವೇಳೆ ತೆಂಗಿನ ಮರದಿಂದ ಶೇಂದಿ ತೆಗೆಯುತ್ತಿದ್ದಾಗ ಅಕಸ್ಮಿಕವಾಗಿ ಕಾಲುಜಾರಿ ಬಿದ್ದರೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಇವರು ಆ.15ರಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News