ರಾಷ್ಟ್ರ ಪ್ರೇಮ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಇರಬೇಕು: ಉದ್ಯಾವರ ನಾಗೇಶ್ ಕುಮಾರ್

Update: 2019-08-15 16:15 GMT

ಉದ್ಯಾವರ, ಆ.15: ರಾಷ್ಟ್ರಪ್ರೇಮ, ದೇಶಪ್ರೇಮ ಎಂಬುದು ಕೇವಲ ಮಾತುಗಳಲ್ಲಿ, ಹಾಡುಗಳಲ್ಲಿ ಮಾತ್ರವಲ್ಲ ನಮ್ಮ ದೈನಂದಿನ ಬದುಕಿನಲ್ಲಿಯೂ ಇರಬೇಕಾಗಿದೆ. ಇಂದು ನಾವು ನುಡಿಯಲ್ಲಿ ಮಾತ್ರ ದೇಶಭಕ್ತಿಯನ್ನು ಅಳೆಯುತ್ತಿದ್ದೇವೆ, ನಡೆಯಲ್ಲಿ ಅಲ್ಲ ಎಂದು ಲೇಖಕ, ನಾಟಕಕಾರ ಉದ್ಯಾವರ ನಾಗೇಶ್ ಕುಮಾರ್ ಹೇಳಿದ್ದಾರೆ.

ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ 73ನೇ ಸ್ವಾತಂತ್ರ್ಯೋತ್ಸವಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ 73ನೇ ಸ್ವಾತಂತ್ರ್ಯೋತ್ಸವಸಮಾರಂದಅ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಧ್ವಜಾರೋಹಣ ನೆರವೇರಿಸಿದ ಡಾ. ತ್ರಿವೇಣಿ ವೇಣುಗೋಪಾಲ್ ಮಾತನಾಡಿ, ಹಲವರ ಬಲಿದಾನದಿಂದ ದೊರಕಿದ ಸ್ವಾತಂತ್ರವನ್ನ ಉಳಿಸಿಕೊಳ್ಳಬೇಕಾದ ಜವಾಬ್ದಾರಿ ಇಂದಿನ ವಿದ್ಯಾರ್ಥಿಗಳ ಮೇಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಶಾಲಾಡಳಿತ ಮಂಡಳಿ ಸದಸ್ಯ ಸುರೇಶ್ ಶೆಣೈ ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ಸಮರ್ಥ್ ಸಿ.ಎಸ್., ಲವೀಶ್, ಶಾಲಾ ನಾಯಕ ಮನ್ವಿತ್, ಅನುಷಾ ಇವರು ಸ್ವಾತಂತ್ರ್ಯೋತ್ಸವದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹೇಳಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕರ್ಕೇರ, ಶಾಲಾಬಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯ ರಾದ ಗಣಪತಿ ಕಾರಂತ್ ಅತಿಥಿಗಳನ್ನು ಸ್ವಾಗತಿಸಿ, ಸಹ ಶಿಕ್ಷಕಿ ಗೀತಾ ವಂದಿಸಿದರು. ಸಹಶಿಕ್ಷಕಿ ರತ್ನಾವತಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News