ರಾಷ್ಟ್ರ ವಾಹಿನಿಯಲ್ಲಿ ಒಂದಾಗಬೇಕು: ಮುಹಮ್ಮದ್ ಇಸ್ಹಾಕ್

Update: 2019-08-15 16:25 GMT

ಕಾಪು: ಧಾರ್ಮಿಕವಾಗಿ ಪರಸ್ಪರರನ್ನು ಗೌರವಿಸುವ ಪರ ಧರ್ಮ ಸಹಿಷ್ಣುತೆ, ಕೋಮು ಸಾಮರಸ್ಯವನ್ನು ಕಾಪಾಡುವ ಮೂಲಕ ಭಾರತೀಯ ರಾಷ್ಟ್ರ ವಾಹಿನಿಯಲ್ಲಿ ಒಂದಾಗಬೇಕಾಗಿದೆ ಎಂದು ಧ್ವಜಾರೋಹಣ ನೆರವೇರಿಸಿದ ಕಾಪು ತಹಶೀಲ್ದಾರ್ ಮುಹಮ್ಮದ್ ಇಸ್ಹಾಕ್ ಹೇಳಿದರು.

ಅವರು ಕಾಪು ಬಂಗ್ಲೆ ಮೈದಾನದಲ್ಲಿ ತಾಲೂಕು ಆಡಳಿತ ಹಾಗೂ ಕಾಪು ಪುರಸಭಾ ವತಿಯಿಂದ 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾತಿ ಬೇಧ, ವರದಕ್ಷಿಣೆ, ನಿರುದ್ಯೋಗ ಸಮಸ್ಯೆ, ಬಡತ ಮುಂತಾದ ಸಾಮಾಜಿಕ ದುಷ್ಟ ಪಿಡುಗುಗಳ ವಿರುದ್ಧ ಜಾಗೃತಿ ಮೂಡಿಸಿ ಪ್ರತಿಯೋರ್ವರು ಸ್ವಾವಲಂಬಿಯಾಗಬೇಕಾಗಿದೆ. ಇದರಿಂದ ದೇಶ ಅಭಿವೃದ್ಧಿ ಹೊಂದುತ್ತದೆ ಎಂದು ಅವರು ಹೇಳಿದರು.

ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಕಾಪು ತಾಲ್ಲೂಕಿಗೆ ಮಿನಿ ವಿಧಾನಸೌಧ ಅಗತ್ಯತೆ ಇದ್ದು, 10 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಜಾಗ ಸಮಸ್ಯೆಯಿಂದ ಇದ್ದ ಜಾಗವನ್ನು ಸಮರ್ಪಕ ರೀತಿಯಲ್ಲಿ ಬಳಸಲು ಯೋಜನೆ ರೂಪಿಸಲಾಗಿದೆ ಎಂದರು.

ಕಾಪು ವೃತನಿರೀಕ್ಷಕ ಮಹೇಶ್ ಪ್ರಸಾದ್, ಪುರಸಭಾ ಮುಖ್ಯಾಧಿಕಾರಿ ರಾಯಪ್ಪ, ಕಂದಾಯ ನಿರೀಕ್ಷಕ ರವಿಶಂಕರ್, ಮಾಜಿ ಶಾಸಕ ವಿನಯಕುಮಾರ್ ಸೊರಕೆ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಶೆಟ್ದಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ವಿಲ್ಸನ್ ರೊಡಿಗ್ರಸ್, ಶಿಲ್ಪ ಸುವರ್ಣ, ವೈ ಸುದೀರ್ ಕುಮಾರ್, ಗೀತಾಂಜಲಿ ಸುವರ್ಣ, ಪುರಸಭಾ ಮಾಜಿ ಅಧ್ಯಕ್ಷೆ ಸೌಮ್ಯ ಸಂಜೀವ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಶಶಿ ಪ್ರಭ, ರೇಣುಕಾ ಪುತ್ರನ್, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮನೋಹರ ಶೆಟ್ಟಿ ಕಾಪು ಉಪಸ್ಥಿತರಿದ್ದರು.

ಕಾಪು ಪ್ರೊಬಷನರಿ ಎಸ್.ಐ. ಸದಾಶಿವ ಗೌರೋಜಿ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು. ಕಾಪು ಪುರಸಭಾ ಮುಖ್ಯಾಧಿಕಾರಿ ರಾಯಪ್ಪ ಸ್ವಾಗತಿಸಿದರು. ಪೊಲಿಪು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜ್ಯೋತಿ ಕುಮಾರಿ ಕಾರ್ಯಕ್ರಮ ನಿರ್ವಹಿಸಿದರು. 

ಹಕ್ಕುಪತ್ರ ವಿತರಣೆ, ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಚೆಕ್ ವಿತರಿಸಲಾಯಿತು. ಬಳಿಕ  ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯತು. ಇದೇ ವೇಳೆ ಪಿಯುಸಿ, ಎಸ್‍ಎಸ್‍ಎಲ್‍ಸಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News