ಭಟ್ಕಳ: ಆ.17ರಿಂದ ಮುಸ್ಲಿಮ್ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಸಮಸ್ಯೆ ಕುರಿತು ರಾಜ್ಯಮಟ್ಟದ ಸಮಿನಾರ್

Update: 2019-08-15 17:12 GMT

ಭಟ್ಕಳ: ಭಟ್ಕಳದ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ಸಮಾರಂಭದ ವರ್ಷಾಚರಣೆಯ ಅಂಗವಾಗಿ ಆ.17 ಮತ್ತು 18 ರಂದು 'ಮುಸ್ಲಿಮ್ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳು ಸವಾಲುಗಳು ಮತ್ತು ಪರಿಹಾರೋಪಾಯಗಳು' ಎಂಬ ವಿಷಯದಲ್ಲಿ  ಎರಡು ದಿನಗಳ ರಾಜ್ಯಮಟ್ಟದ ಸೆಮಿನಾರ್ ಅಂಜುಮನ್ ಇಂಜಿನೀಯರಿಂಗ್ ಕಾಲೇಜು ಸೆಮಿನಾರ್ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೋ ತಿಳಿಸಿದರು.

ಅವರು ಗುರವಾರ ಅಂಜುಮನ್ ಅಡಳಿತ ಮಂಡಳಿ ಬ್ಲಾಕ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ವಿಷಯ ತಿಳಿಸಿದರು. 

ಮುಸ್ಲಿಮ್ ಶಿಕ್ಷಣ ಸಂಸ್ಥೆಗಳು ಭವಿಷ್ಯದಲ್ಲಿ ಎದುರಿಸಬಹುದಾದ ಸವಾಲುಗಳನ್ನು ಸಮಿನಾರ್ ನಲ್ಲಿ ಮುಕ್ತವಾಗಿ ಚರ್ಚಿಸಿ ಅದಕ್ಕೆ ಪರಿಹಾರೋಪಾಯಗಳನ್ನು ಕಂಡುಕೊಳ್ಳುವಲ್ಲಿ ಈ ಸೆಮಿನಾರ್ ಸಹಾಯವಾಗುವುದು ಎಂದು ಅವರು ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ದೇಶದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳ ಶಿಕ್ಷಣ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದು ಆ.17ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದ್ದು ಉತ್ತರಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಹರಿಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಪ್ರತಿಷ್ಟಿತ ಬ್ಯಾರಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸೈಯ್ಯದ್ ಮುಹಮ್ಮದ್ ಬ್ಯಾರಿ ಹಾಗೂ ಶಾಸಕ ಸುನಿಲ್ ನಾಯ್ಕ ಗೌರವ ಅತಿಥಿಯಾಗಿ ಉಪಸ್ಥಿತರಿರುವರು.

ಆ.18 ರಂದು ಸಂಜೆ 4.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಉ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮುಹಮ್ಮದ್ ರೋಷನ್ ಮುಖ್ಯ ಅತಿಥಿಯಾಗಲಿದ್ದು, ದೆಹಲಿಯ ಸೆಂಟರ್ ಫಾರ್ ರೀಸರ್ಚ ಆ್ಯಂಡ್ ಡಿಬೆಟ್ಸ್ ಇನ್ ಡೆವಲಪ್ಮೆಂಟ್ ಪಾಲಿಸಿ ಯ ಅಧ್ಯಕ್ಷ ಡಾ. ಅಬು ಸಾಲಿಹ್ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಎರಡು ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೋ ವಹಿಸಲಿದ್ದಾರೆ. 

ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ಸ್ಕಿಲ್ ಮಿಷನ್ ನಿರ್ದೇಶಕ ಎಸ್.ಎ ಅಶ್ರಫ್ ಹಸನ್, ಪ್ರೇಮಿಜಿ ವಿಶ್ವವಿದ್ಯಾಲಯದ ಶೈಕ್ಷಣಿಕ ತಂತ್ರಜ್ಞ ಮುಜಾಹಿದ್ದುಲ್ ಇಸ್ಲಾಮ್, ಬ್ರೇನಿ ಸ್ಟಾರ್ ಶಿಕ್ಷಣ ಫೌಂಡೇಶನ್ ಸಿಇಒ ಸೈಯ್ಯದ್ ತನ್ವೀರ್ ಆಹ್ಮದ್, ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ ಎಂ.ಎ.ಬಾಸಿತ್, ಎನ್.ಸಿ.ಆರ್.ಟಿ ಸಲಹಾ ಬೋರ್ಡ ಸದಸ್ಯ ಮುಹಮ್ಮದ್ ಸಯೀದುಲ್ಲಾ ಷರೀಫ್,  ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾ ಗೋಷ್ಟಿಯಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಿದ್ದೀಖ್, ಕಾರ್ಯದರ್ಶಿ ಮೊಹಸಿನ್ ಶಾಬಂದ್ರಿ, ಶತಮಾನೋತ್ಸವ ಸಮಾರಂಭದ ಸಂಚಾಲಕ ಅಬ್ದುಲ್ ರಖೀಬ್ ಎಂ.ಜೆ, ಸೆಮಿನಾರ್ ಸಂಚಾಲಕ ಪ್ರೋ ಮುಸ್ತಾಖ್ ಆಹ್ಮದ್ ಭಾವಿಕಟ್ಟಿ, ಮ್ಯಾಕಾನಿಕಲ್ ವಿಭಾಗದ ಮುಖ್ಯಸ್ಥ ಡಾ. ಫಝಲುರ್ರಹ್ಮಾನ್, ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಟಿ.ಎಂ.ಪಿ. ರಾಜಕುಮಾರ್, ಎಂ.ಬಿ.ಅ ವಿಭಾಗದ ಮುಖ್ಯಸ್ಥೆ ಪ್ರೊ.ಝಾಹಿದ್ ಹಸನ್ ಮತ್ತು ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News