ಗೆಳತಿಯ ಖಾಸಗಿ ಫೋಟೋ ಬಳಸಿ ಬ್ಲ್ಯಾಕ್ ಮೇಲೆ: ಆರೋಪಿ ಬಂಧನ

Update: 2019-08-15 18:08 GMT

ಬೆಂಗಳೂರು, ಆ.15: ಗೆಳತಿ ಜತೆಗಿನ ಖಾಸಗಿ ಫೋಟೋ ಸೆರೆ ಹಿಡಿದು, ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಸೈಬರ್ ಕ್ರೈಂ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಾಣಸವಾಡಿ ಕಿರಣ್(23) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಎರಡು ವರ್ಷಗಳಿಂದ ಬಾಣಸವಾಡಿಯ ಹೇರ್ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯನ್ನು ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿ ಎರಡು ತಿಂಗಳಿನಿಂದ ಆಕೆಯ ಜೊತೆ ಕಳೆದ ಖಾಸಗಿ ಕ್ಷಣಗಳನ್ನು ಮೊಬೈಲ್‌ನಲ್ಲಿ ಫೋಟೋ ತೆಗೆದುಕೊಂಡಿದ್ದ. ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ ಆಕ್ರೋಶಗೊಂಡಿದ್ದ ಆರೋಪಿ ಫೋಟೋಗಳನ್ನು ಸಂಬಂಧಿಗೆ ಕಳುಹಿಸಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಿ ದೂರು ದಾಖಲಾಗಿತ್ತು.

ದೂರಿನ್ವಯ ತನಿಖೆ ನಡೆಸಿದ ಪೊಲೀಸರು, ಆರೋಪಿ ಕಿರಣ್‌ನನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News