ರೈತರ ಬೆಳೆಗೆ ಉತ್ತಮ ಪ್ರತಿಫಲ ಸಿಕ್ಕಾಗ ಸ್ವಾತಂತ್ರ್ಯಕ್ಕೆ ಅರ್ಥ: ಚಿಕ್ಕಮಗಳೂರು ಜಿಪಂ ಅಧ್ಯಕ್ಷೆ ಸುಜಾತಾ

Update: 2019-08-15 18:46 GMT

ಚಿಕ್ಕಮಗಳೂರು, ಆ.15: ರೈತರ ಬೆಳೆಗೆ ಒಳ್ಳೆಯ ಪ್ರತಿಫಲ ಸಿಕ್ಕಾಗ ಮಾತ್ರ ನಿಜವಾದ ಸ್ವಾತಂತ್ರ್ಯ ದಿನಾಚರಣೆಗೆ ಅರ್ಥ ಬರುತ್ತದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ  ಹೇಳಿದರು

ಜಿಲ್ಲಾ ಪಂಚಾಯತ್ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಬೋಸ್, ಭಗತ್ ಸಿಂಗ್, ಜವಹಾರ್ ಲಾಲ್ ನೆಹರು, ಅಂಬೇಡ್ಕರ್ ಅವರಂತಹ ಧೀಮಂತ ನಾಯಕರ ಪರಿಶ್ರಮದಿಂದ ಇಂದು ಸ್ವಾತಂತ್ರ್ಯ ದಿನವನ್ನು ದೇಶದೆಲ್ಲಡೆ ಇಂದು ಆಚರಿಸಲಾಗುತ್ತಿದೆ ಎಂದರು.

ದೇಶದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರಕಿ ಅವರ ವಿದ್ಯಾಭ್ಯಾಸಕ್ಕೆ ತಕ್ಕ ಪ್ರತಿಫಲ ಸಿಕ್ಕಾಗ ಮಾತ್ರ ನಿಜವಾದ ಸ್ವಾತಂತ್ರ್ಯ ದೊರಕುತ್ತದೆ ಅಲ್ಲದೇ ದೇಶವು ಇಂದು ವಿಶ್ವ ಮಟ್ಟಕ್ಕೆ ಭಾರತ ತಲುಪಿರುವುದಕ್ಕೆ ಪ್ರಧಾನ ಮಂತ್ರಿಗಳೇ ಕಾರಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರಾದ ಸೋಮಶೇಖರ್, ಬೆಳವಾಡಿ ರವೀಂದ್ರ, ಪ್ರೇಮ ಮಂಜುನಾಥ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಅಶ್ವತಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News