ಕಾಶ್ಮೀರದಲ್ಲಿ ಸೋಮವಾರದಿಂದ ಶಾಲೆ, ಸರಕಾರಿ ಕಚೇರಿಗಳ ಕಾರ್ಯಾರಂಭ

Update: 2019-08-16 08:23 GMT

ಹೊಸದಿಲ್ಲಿ, ಆ.16: ಸ್ಥಳೀಯಾಡಳಿತ ಅಲ್ಲಿನ ತಳಮಟ್ಟದ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಸೋಮವಾರದಿಂದ ಕಾಶ್ಮೀರದಲ್ಲಿ ಶಾಲೆಗಳು ಹಾಗೂ ಸರಕಾರಿ ಕಚೇರಿಗಳು ಮತ್ತೆ ತೆರೆಯಲಿವೆ ಎಂದು ಜಮ್ಮ-ಕಾಶ್ಮೀರದ ಆಡಳಿತ ಮೂಲಗಳು ತಿಳಿಸಿವೆ.

ಕಾಶ್ಮೀರದಲ್ಲಿ ವಿಧಿಸಲಾಗಿರುವ ನಿರ್ಬಂಧಗಳನ್ನು ಮುಂದಿನ ಕೆಲವೇ ದಿನಗಳಲ್ಲಿ ಸಡಿಲಿಸಲಾಗುವುದು ಎಂದು ಸುಪ್ರೀಂಕೋರ್ಟ್‌ಗೆ ಇಂದು ಕೇಂದ್ರ ಸರಕಾರ ತಿಳಿಸಿದೆ.

ಕಳೆದ 10 ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಮಾಧ್ಯಮಗಳ ಮೇಲೂ ನಿರ್ಬಂಧ ಹೇರಲಾಗಿದೆ. ಈ ನಿರ್ಬಂಧವನ್ನು ತಕ್ಷಣವೇ ತೆರವುಗೊಳಿಸಬೇಕೆಂದು ಕಾಶ್ಮೀರ ಟೈಮ್ಸ್ ನ ಕಾರ್ಯಕಾರಿ ಸಂಪಾದಕಿ ಅನುರಾಧಾ ಬಾಸಿನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಕೇಂದ್ರ ಸರಕಾರ ಉತ್ತರಿಸಿದೆ.

 ‘‘ಕಾಶ್ಮೀರದ ತಳಮಟ್ಟದ ಪರಿಸ್ಥಿತಿಯನ್ನು ಪ್ರತಿದಿನವೂ ಅವಲೋಕಿಸಲಾಗುತ್ತಿದೆ. ಸುಪ್ರೀಂಕೋರ್ಟ್ ಭದ್ರತಾ ಏಜೆನ್ಸಿಗಳ ಮೇಲೆ ನಂಬಿಕೆ ಇಡಬೇಕಾಗಿದೆ. ರಾಜ್ಯದ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿದೆ ಎಂದು ಕೇಂದ್ರ ಸರಕಾರವು ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಲು ಯತ್ನಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News