ದಿ ಶೆಫರ್ಡ್ಸ್ ಅಕಾಡಮಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2019-08-16 08:33 GMT

ಮಂಗಳೂರು, ಆ.16: ನಗರದ ಅತ್ತಾವರದಲ್ಲಿರುವ ದಿ ಶೆಫರ್ಡ್ಸ್ ಇಂಟರ್‌ನ್ಯಾಶನಲ್ ಅಕಾಡಮಿಯಲ್ಲಿ 73ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಅಕಾಡಮಿಯ ಪುಟಾಣಿ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಸ್ವಾತಂತ್ರ್ಯ  ಹೋರಾಟಗಾರರಂತೆ ವಸ್ತ್ರಗಳನ್ನು ಧರಿಸಿ ಸಂಭ್ರಮಿಸಿದರು. ಧ್ವಜಾರೋಹಣದಲ್ಲಿ ಪಾಲ್ಗೊಂಡರು. ಮೊಂಟೆಸ್ಸರಿ- 2 ಮತ್ತು 3 ಇದರ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡಿದರು.

ಎ.ಕೆ. ಗ್ರೂಪ್ ಆಫ್ ಕಂಪನೀಸ್ ಅಧ್ಯಕ್ಷ ಎಂ.ಅಹ್ಮದ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಇಂಡಿಯನ್ ಡಿಸೈನ್ ಸ್ಕೂಲ್ ಪ್ರಾಂಶುಪಾಲ, ಆರ್ಕಿಟೆಕ್ಟ್ ರಮಾನಾಥ್ ನಾಯ್ಕ್, ದಿ ಶೆಫರ್ಡ್ಸ್ ಇಂಟರ್‌ನ್ಯಾಶನಲ್ ಅಕಾಡಮಿಯ ಅಧ್ಯಕ್ಷ, ಆರ್ಕಿಟೆಕ್ಟ್ ಮುಹಮ್ಮದ್ ನಿಸಾರ್ ಸಭೆಯನ್ನುದ್ದೇಶಿಸಿ ಮಾತನಾಡಿದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News