ಕೇಂದ್ರ ಸರಕಾರ 10 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Update: 2019-08-16 14:54 GMT

ಹುಬ್ಬಳ್ಳಿ, ಆ. 16: ರಾಜ್ಯದ ನೆರೆ ಸಂತ್ರಸ್ತರ ಪುನರ್‌ವಸತಿ ಹಾಗೂ ಪರಿಹಾರಕ್ಕೆ ಕೇಂದ್ರದಿಂದ 5 ಸಾವಿರ ಕೋಟಿ ರೂ. ಅನುದಾನ ಸಾಕಾಗುವುದಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೂ ಹೆಚ್ಚಿನ ನೆರವು ಕೋರಬೇಕೆಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಆಗ್ರಹಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿನ ಮಳೆ ಮತ್ತು ಪ್ರವಾಹದಿಂದ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಇದೇ ವೇಳೆ ತಿಳಿಸಿದರು.

ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಡಿ.ಸಿ.ತಮ್ಮಣ್ಣ ಸೇವಾ ಪ್ರತಿಷ್ಠಾನ ವತಿಯಿಂದ ನೆರೆ ಸಂತ್ರಸ್ತರಿಗಾಗಿ 6 ಲಾರಿಗಳಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಆಹಾರ ಪದಾರ್ಥಗಳು ರವಾನಿಸಿ ಸಂತ್ರಸ್ತರಿಗೆ ವಿತರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ನೆರೆ ಹಾನಿಯನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರಕಾರ ರಾಷ್ಟ್ರೀಯ ವಿಪತ್ತು ನಿಧಿಯಿಂದ ಶೀಘ್ರವೇ 10ಸಾವಿರ ಕೋಟಿ ರೂ.ಅನುದಾನ ನೀಡಬೇಕು ಎಂದ ಅವರು, ಮನೆ-ಮಠ ಕಳೆದುಕೊಂಡ ಜನರ ನೆರವಿಗೆ ಕೇಂದ್ರ ಸರಕಾರ ಧಾವಿಸಬೇಕೆಂದು ಆಗ್ರಹಿಸಿದರು.

‘ಹೊಸದಿಲ್ಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಪ್ರವಾಹದಿಂದ ತತ್ತರಿಸಿರುವ ರಾಜ್ಯಕ್ಕೆ ಪರಿಹಾರ ಕಾರ್ಯಗಳಿಗಾಗಿ ಕೂಡಲೇ ಅನುದಾನ ಬಿಡುಗಡೆಗೆ ಕ್ರಮವಹಿಸುವಂತೆ ಮನವಿ ಮಾಡಲಾಯಿತು. ಪ್ರಧಾನ ಮಂತ್ರಿಗಳು ಸ್ಪಂದಿಸಿದ್ದು ಕೂಡಲೇ ನಷ್ಟದ ಅಂದಾಜು ಮಾಡಲು ಕೇಂದ್ರ ಸರಕಾರದ ಅಧ್ಯಯನ ತಂಡವನ್ನು ಕಳುಹಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ’

-ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News