ಜಮ್ಮು-ಕಾಶ್ಮೀರದಲ್ಲಿ ಅಸ್ಥಿರತೆಗೆ ಪಾಕ್ ಪ್ರಯತ್ನಿಸುತ್ತಿದ್ದರೂ ಜೀವಹಾನಿಯಿಲ್ಲ: ಕೇಂದ್ರ ಸರಕಾರ

Update: 2019-08-16 15:06 GMT

 ಶ್ರೀನಗರ, ಆ.16: ಕಳೆದ ಸುಮಾರು ಎರಡು ವಾರಗಳಿಂದ ಜಮ್ಮು-ಕಾಶ್ಮೀರದಲ್ಲಿ ಹೇರಲಾಗಿರುವ ನಿರ್ಬಂಧಗಳನ್ನು ಶುಕ್ರವಾರ ಸಮರ್ಥಿಸಿಕೊಂಡಿರುವ ಕೇಂದ್ರವು,ಈ ನಿರ್ಬಂಧಗಳು ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಗುಂಪುಗಳು ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ದಾಳಿ ನಡೆಸಲು ಹೊಂಚು ಹಾಕುತ್ತಿವೆ ಎಂಬ ವಿಶ್ವಾಸಾರ್ಹ ಗುಪ್ತಚರ ಮಾಹಿತಿಗಳ ಹಿನ್ನೆಲೆಯಲ್ಲಿ ತೆಗೆದುಕೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳಾಗಿವೆ ಎಂದು ಬಣ್ಣಿಸಿದೆ.

  ಸುದ್ದಿಗಾರರೊಂದಿಗೆ ಮಾತನಾಡಿದ ಜಮ್ಮು-ಕಾಶ್ಮೀರ ಮುಖ್ಯ ಕಾರ್ಯದರ್ಶಿ ಬಿವಿಆರ್ ಸುಬ್ರಹ್ಮಣ್ಯಂ ಅವರು, ಒಂದೇ ಒಂದು ಜೀವಹಾನಿ ಅಥವಾ ಯಾರಿಗೇ ಗಂಭೀರ ಗಾಯವಾಗಿರುವುದು ವರದಿಯಾಗಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಯನ್ನು ತಡೆಯಲು ಹಾಗೂ ಶಾಂತಿಯನ್ನು ಕಾಯ್ದುಕೊಳ್ಳಲು ಕೆಲವೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News