×
Ad

ಉಗ್ರ ದಾಳಿ ಸಾಧ್ಯತೆ ಶಂಕೆ: ಮಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಶೋಧ ಕಾರ್ಯ

Update: 2019-08-16 21:03 IST

ಮಂಗಳೂರು, ಆ.16: ಮಂಗಳೂರು ನಗರದ ಆಸ್ಪತ್ರೆ, ಮಾಲ್, ಐಟಿ ಕಂಪೆನಿ ಸೇರಿದಂತೆ ಪ್ರಮುಖ ಸ್ಥಳಗಳು ಹಾಗೂ ಕಟ್ಟಡಗಳಲ್ಲಿ ಭದ್ರತೆಯನ್ನು ಪರಿಶೀಲಿಸಲು ಮಂಗಳೂರು ನಗರ ಪೊಲೀಸರು ಶುಕ್ರವಾರ ದಿಢೀರನೆ ಶೋಧ ಕಾರ್ಯ ನಡೆಸಿದರು.

ಮುಖ್ಯವಾಗಿ ಮುಡಿಪು ಇನ್ಫೋಸಿಸ್, ಸೂರ್ಯ ಇನ್ಫೋಟೆಕ್, ಕ್ಷೇಮ ಆಸ್ಪತ್ರೆ ಸೇರಿದಂತೆ ಪ್ರಮುಖ ಕೇಂದ್ರಗಳಲ್ಲಿ ಹಠಾತ್ತನೆ ಪೊಲೀಸ್ ಪಹರೆ ಏರ್ಪಡಿಸಿ ಶ್ವಾನದಳ, ಬಾಂಬ್ ಸ್ಕ್ವಾಡ್ ಬಳಸಿಕೊಂಡು ವ್ಯಾಪಕ ಪ್ರಮಾಣದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದರು.

ದೇಶದ ಯಾವುದೇ ಭಾಗದಲ್ಲಿ ಉಗ್ರರ ದಾಳಿ ಸಾಧ್ಯತೆ ಶಂಕೆಯಲ್ಲಿ ಕರಾವಳಿ ಪ್ರದೇಶವಾಗಿರುವ ಕಾರಣ ಇಲ್ಲಿಯೂ ಬಿಗು ತಪಾಸಣೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಹೈ ಅಲಾರ್ಟ್ ಘೋಷಿಸಲಾಗಿದೆ. ಇದೇ ರೀತಿ ಮಂಗಳೂರಿನಲ್ಲಿ ಕಟ್ಟುನಿಟ್ಟಿನ ಭದ್ರತೆಯ ಭಾಗವಾಗಿ ಈ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News