ಉಡುಪಿ: ಗಣಿತ ಉಪನ್ಯಾಸಕರಿಗೆ ವಿಶೇಷ ಕಾರ್ಯಾಗಾರ

Update: 2019-08-16 16:24 GMT

ಉಡುಪಿ, ಆ.16: ಸ್ಥಳೀಯ ವಿದ್ಯೋದಯ ಟ್ರಸ್ಟ್‌ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಗಣಿತ ಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಪುನಶ್ಚೇತನ ಕಾರ್ಯಾಗಾರವನ್ನು ಜಿಲ್ಲಾ ಗಣಿತ ಉಪನ್ಯಾಸಕರ ಸಂಘ ಅಯೋಜಿಸಿತ್ತು.

ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎನ್. ನಾಗರಾಜ ಬಲ್ಲಾಳ್ ದೀಪ ಬೆಳಗಿಸಿ ಉದ್ಘಾಟಿಸುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ. ಗಣೇಶ್ ರಾವ್ ಹಾಗೂ ವಿದ್ಯೋದಯ ಕಾಲೇಜಿನ ಪ್ರಾಂಶುಪಾಲರಾದ ಎಲ್.ಛಾತ್ರ ಉಪಸ್ಥಿತರಿದ್ದು ಕಾರ್ಯಾಗಾರಕ್ಕೆ ಶುಭ ಹಾರೈಸಿದರು.

ಕಾಸರಗೋಡಿನ ಚಿನ್ಮಯ ವಿದ್ಯಾಲಯದ ಪ್ರಾಂಶುಪಾಲ ಪುಷ್ಪರಾಜ್ ಬದಿಯಡ್ಕ, ಉಡುಪಿಯ ಸೀತಾರಾಮ ಶೆಟ್ಟಿಗಾರ್ ಮತ್ತು ಹರಿಪ್ರಸಾದ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿದರು.

ಉಡುಪಿ ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕ ಸಂಘದ ಅಧ್ಯಕ್ಷರಾದ ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಶಾಂತ್ ಭಟ್ ಸ್ವಾಗತಿಸಿ, ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಸೌಮ್ಯಾ ಕಜೆಕಾರ್ ಕಾರ್ಯಕ್ರಮ ನಿರ್ವಹಿಸಿದರು. ಬಜಗೋಳಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರವೀಣ್ ವಂದಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ನೂರಕ್ಕೂ ಅಧಿಕ ಗಣಿ ಉಪನ್ಯಾಸಕರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News